ಬೀಳಗಿ ತಾಲೂಕಿನ ಮುತ್ತಲದಿನ್ನಿ ತಾಂಡಾದಲ್ಲಿ ಸಿಸಿ ರಸ್ತೆ ಹಾಗೂ ಪೇವರ್ಸ್ ಅಭಿವದ್ಧಿ ಕಾಮಗಾರಿಗಳಿಗೆ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು. ತಾಪಂ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹನಮಂತ ಕಾಖಂಡಕಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಠಿಮಠ ಇತರರಿದ್ದು.
ಬೀಳಗಿ: ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಬಲಪಡಿಸುವ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ ದಿಟ್ಟ ಹೆಜ್ಜೆ ಇಡುತ್ತಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಜೆ. ಟಿ. ಪಾಟೀಲ ಹೇಳಿದರು.
ತಾಲೂಕಿನ ಟಕ್ಕಳಕ್ಕಿ ತೋಟದ ವಸ್ತಿಯಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವದ್ಧಿ ಯೋಜನೆ (ಸಿಎಮ್ ಐಡಿಪಿ) ಅಡಿಯಲ್ಲಿ 50 ಲಕ್ಷ ರೂ. ಅನುದಾನದಲ್ಲಿ ಎನ್‌ಎಚ್-218 ರಿಂದ 1.80 ಕಿಮೀ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಅಭಿವದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ 2025-26 ನೇ ಸಾಲಿನ ಎಸ್‌ಸಿ ಉಪಯೋಜನೆಯಡಿ ಮುತ್ತಲದಿನ್ನಿ ತಾಂಡಾದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿಗಳು ಎಸ್‌ಸಿ ಕಾಲನಿಯ ಮೂಲ ಸೌಕರ್ಯವನ್ನು ಸುಧಾರಿಸಲು ಸಹಕಾರಿಯಾಗಲಿವೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹಣಮಂತ ಕಾಖಂಡಕಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಠಿಮಠ, ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.