ಚಿಟಗುಪ್ಪ ತಾಲೂಕಿನ ಮಂಗಲಗಿವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಮಂಗಲಗಿವಾಡಿ ಶಾಲೆ ಎದುರು ಮಕ್ಕಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ
ಚಿಟಗುಪ್ಪ: ತಾಲೂಕಿನ ಮಂಗಲಗಿವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಂಟಾಗಿರುವ ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ಹಲವು ದಿನಗಳಿಂದ ಕುಡಿವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಣ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿಯ ರಾಜ್ಯಾಧ್ಯ ದಿಲೀಪಕುಮಾರ ವರ್ಮ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಸಮಸ್ಯೆ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಣದ ಹಿತದೃಷ್ಟಿಯಿಂದ ಕೂಡಲೇ ಶುದ್ಧ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ರಾಮ ಟಕದ ಅಧ್ಯ ಭರತ ಜಾಬಾ, ಶ್ರೀಕಾಂತ ಹೊಸಮನಿ, ಓಂಕಾರ ಮೌರ್ಯ, ಸಾಗರ ಮೌರ್ಯ, ಇಸ್ಮಾಯಿಲ್, ಅಮೃತ ಜಾಬಾ, ಆರ್. ಚೌಡಯ್ಯ, ಗೌತಮ, ಶಿವಕುಮಾರ, ಶಿವಪುತ್ರ, ಪ್ರಿಯಾಂಕಾ, ಶ್ಯಾವಂತಾ, ಉಷಾರಾಣಿ ಇತರರು ಭಾಗವಹಿಸಿದ್ದರು.