ಪ್ರಸ್ತುತ ಸುಪ್ರೀಂ ಕೋರ್ಟ್ ಪ್ರಮುಖವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರೀಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣ, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣ, ಕೌಟುಂಬಿಕ ವಿವಾದ, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನು ವಿವಾದ, ಭೂ ಸ್ವಾಧಿನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಕ್ಕೆ ಗುರುತಿಸಲಾಗಿದೆ.