ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ.25 ಸೀಟುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಉಳಿಕೆಯಾಗಿರುವ ಸೀಟುಗಳಿಗೆ ಜೂ.11ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಉಳಿಕೆಯಾಗಿರುವ ಸೀಟುಗಳಿಗೆ ಜೂ.11ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಣೆ ಹೊರಡಿಸಿದೆ.