ಚಿಕ್ಕದೇವಮ್ಮ ಬೆಟ್ಟದಲ್ಲಿ ವಿಶೇಷ ಪೂಜೆ

ಸರಗೂರು ತಾಲೂಕಿನ ಪ್ರಸಿದ್ಧ ಚಿಕ್ಕ ದೇವಮ್ಮ ಬೆಟ್ಟದ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಸರಗೂರು ತಾಲೂಕಿನ ಪ್ರಸಿದ್ಧ ಚಿಕ್ಕ ದೇವಮ್ಮ ಬೆಟ್ಟದ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
Published on
ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಬೆಟ್ಟದ ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರ ದಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನೆರವೇರಿದವು.

ಬೆಳಗ್ಗೆಯಿಂದಲೇ ದೇವಾಲಯಕ್ಕೆ ಆಗಮಿಸಿದ ಭಕ್ತರು ದೇವಿ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಯುವಕರು ಹಾಗೂ ಕುಟುಂಬ ಸಮೇತರಾಗಿ ಭಕ್ತರು ದೇವಿಗೆ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ದೇವಾಲಯದಲ್ಲಿ ಅರ್ಚಕರು ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಪೂಜೆ ಬಳಿಕ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ದಿನವಿಡೀ ಭಕ್ತರ ದಟ್ಟಣೆ ಕಂಡುಬಂದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆಷಾಢ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬೆಟ್ಟದ ತಾಯಿ ಚಿಕ್ಕ ದೇವಮ್ಮನ ದರ್ಶನ ಪಡೆದರೆ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು.

ಚಿಕ್ಕದೇವಮ್ಮ ದೇವಸ್ಥಾನ ಪಾರುಪತ್ತೇದಾರ ಮಹದೇವಸ್ವಾಮಿ, ಮುಖಂಡ ಪುರದಕಟ್ಟೆ ಬಸವರಾಜು, ಚಿಕ್ಕದೇವಣ್ಣ(ಉಪ್ಪಿ), ಶಿವಕುಮಾರ್, ವೀರಣ್ಣ, ದೇವಣ್ಣ, ಮನೋಹರ್, ನಿಂಗರಾಜು, ಮಣಿ, ಸಿದ್ದಲಿಂಗಸ್ವಾಮಿ, ಮಹದೇವಸ್ವಾಮಿ, ನಿಂಗಣ್ಣ, ರವಿ, ವಿನಯ್, ಸೋಮಶೇಖರ್, ಶ್ರೀಕಂಠ ಪ್ರಸಾದ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net