ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿ ಕಾರ್ಯಾಗಾರ

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿಯ ಸಭೆ ನಡೆಯಿತು. ಪ್ರೊ.ರಾಘವ.ಬಿ, ಗಣಪತಿ, ಚಂದನ್ ನಂದರಬೆಟ್ಟು ಸೇರಿದಂತೆ ಇತರರಿದ್ದರು.
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿಯ ಸಭೆ ನಡೆಯಿತು. ಪ್ರೊ.ರಾಘವ.ಬಿ, ಗಣಪತಿ, ಚಂದನ್ ನಂದರಬೆಟ್ಟು ಸೇರಿದಂತೆ ಇತರರಿದ್ದರು.
Published on
ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದಿಂದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿವಿಧ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹಳೇ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಪ್ರಾಂಶುಪಾಲರ ಪೂರ್ಣ ಸಹಕಾರದೊಂದಿಗೆ ಕಳೆದ ಎರಡು ವರ್ಷದಲ್ಲಿ 200ಕ್ಕೂ ಹೆಚ್ಚು ಹೊಸ ಸದಸ್ಯತ್ವ ಮಾಡಿರುವುದಲ್ಲದೆ, ಕಾಲೇಜಿನ ಅಭಿವೃದ್ಧಿಗಾಗಿ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹಾಗೂ ಅವರ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮ ನಡೆಸಲಾಗಿದೆ ಎಂದರು.
ಮುಂದಿನ ಎರಡು ತಿಂಗಳಲ್ಲಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ, ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಎದುರಿಸಲು ಬೇಕಾದ ತರಬೇತಿ ಕಾರ್ಯಾಗಾರವನ್ನು ನಡೆಸುವಂತೆ ಹಾಗೂ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಹಾಗೂ ಇತರ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ತಿಳಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಮಾತನಾಡಿ, ಹಳೇ ವಿದ್ಯಾರ್ಥಿ ಸಂಘ ಕಾಲೇಜಿನ ಮೈದಾನ ಹಾಗೂ ಕಾಲೇಜಿನ ಸುತ್ತಮುತ್ತಲಿನ ಪ್ರಾದೇಶದಲ್ಲಿ ಸ್ವಚ್ಛತೆ ಕೈಗೊಂಡಿದೆ. ಅಲ್ಲದೆ ಹಲವು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗಾಗಿ ನಡೆಸಿಕೊಟ್ಟಿರುವುದಲ್ಲದೆ, ಎನ್‌ಸಿಸಿ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ರೈಫಲ್ ರೆಂಜ್ ಅನ್ನು ಮಾಡಿಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, 2025-26ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ವರದಿಯನ್ನು ಹಾಗೂ ರೈಫಲ್ ರೇಂಜ್ ಕಾಮಗಾರಿ ಹಾಗೂ ಕಾರ್ಯಕ್ರಮದ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ತೆನ್ನಿರಾ ಟೀನಾ ಚಂಗಪ್ಪ ಹಳೆ ವಿದ್ಯಾರ್ಥಿಗಳ ಸಂಘಕ್ಕೆ 5 ಸಾವಿರ ರೂ. ನೀಡಿ ಸಹಕರಿಸಿದರು. ಸಭೆಯಲ್ಲಿ ಹಳೆ ವಿದ್ಯಾರ್ಥಿಸಂಘ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಉಪಾಧ್ಯಕ್ಷ ಬೊಟ್ಟೊಳಂಡ ಗಣಪತಿ, ಸಂಘದ ನಿರ್ದೇಶಕರಾದ ಮಾಗಲು ಲೋಹಿತ್, ಬಿ.ಜಿ.ಹರ್ಷಿತ್, ಎಸ್.ಆರ್.ವತ್ಸಲಾ, ಕೆ.ಎಚ್.ಖುರ್ಷಿದ್ ಬಾನು, ಕೇಲೆಟ್ಟಿರ ದೇವಯ್ಯ, ಆಪಾಡಂಡ ಜಾನ್ಸಿ ಗಣಪತಿ, ಕರವಂಡ ಸೀಮಾ ಗಣಪತಿ, ಪೆಬ್ಬಟ್ಟೀರ ಶೀತಲ್ ಕಾರ್ಯಪ್ಪ, ಚರಣ್ ಬಲ್ಯದ, ಚೀಯಕಪೂವಂಡ ಸಚಿನ್ ಪೂವಯ್ಯ, ಕಾಲೇಜಿನ ಸಿಬ್ಬಂದಿಗಳಾದ ಪವಿತ್ರಾ, ರೇಷ್ಮಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net