ಧಾರವಾಡದಲ್ಲಿ ನಾಳೆ ಮಾಹಿತಿ ಹಕ್ಕು ಅಧಿನಿಯಮದಡಿ ಅಧಿಕಾರಿಗಳಿಗೆ ವಿಶೇಷ ಕಾರ್ಯಾಗಾರ; ಮಾಹಿತಿ ಆಯುಕ್ತರ ಭಾಗಿ RTI Workshop

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಧಾರವಾಡ: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟಿ, ರಾಜಶೇಖರ ಎಸ್. ಮತ್ತು ನಾರಾಯಣ ಚನ್ನಾಳ್ ಅವರ ನೇತೃತ್ವದಲ್ಲಿ ಶನಿವಾರ (ಜ.31) ರಂದು ಬೆಳಿಗ್ಗೆ 11 ಗಂಟೆಯಿಂದ 1:30 ರವರೆಗೆ ಜಿಲ್ಲಾ ಪಂಚಾಯತ್ (RTI Workshop) ​ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕರ್ನಾಟಕ ರಾಜ್ಯ ಮಾಹಿತಿ ಆಯೋಗದಿಂದ ಧಾರವಾಡ ಜಿಲ್ಲೆಯ ಎಲ್ಲ ಪ್ರಥಮ ಮೇಲ್ಮನವಿ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮದ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಸಂವಾದದ ಮೂಲಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಕಾರ್ಯಾಗಾರದಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ನಗರಾಭಿವೃದ್ಧಿ ಇಲಾಖೆ, ಇಂಧನ ಇಲಾಖೆ, ಲೋಕೊಪಯೋಗಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಗೃಹ ಇಲಾಖೆ, ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆ, ಕೃಷಿ ಇಲಾಖೆ, ಹಾಗೂ ಇನ್ನಿತರ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ವೇಳೆ ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಆರ್.ಟಿ.ಐ ಅರ್ಜಿಗಳ ಮತ್ತು ಮೇಲ್ಮನವಿಗಳ ಸ್ವೀಕೃತಿ, ವಿಲೇವಾರಿ ಮತ್ತು ಬಾಕಿ ಅರ್ಜಿಗಳ ಬಗ್ಗೆ ಎಲ್ಲಾ ಇಲಾಖೆಗಳಿಂದ ಅಂಕಿ ಅಂಶಗಳೊಂದಿಗೆ ಸಂಬಂಧಿಸಿದ ಅಧಿಕಾರಿಗಳು ತರಬೇತಿಗೆ ಹಾಜರಾಗಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net