ಲಡ್ಡು ವಿತರಣೆ : ಹಿಪ್ಪೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವಾಲಯ ಸಮಿತಿ ಹಾಗೂ ನಗರಸಭೆ ಸದಸ್ಯ ಗಂಗಾಧರ್ರಾವ್ ಸಹಕಾರದಲ್ಲಿ 10 ಸಾವಿರಕ್ಕೂ ಹೆಚ್ಚು ಲಡ್ಡುಗಳನ್ನು ವಿತರಿಸಲಾಯಿತು. ಶಾಸಕ ಎನ್.ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಎನ್.ಗಣೇಶ್, ಉಪಾಧ್ಯಕ್ಷ ಆನಂದ್, ಸದಸ್ಯ ಸಿ.ಪ್ರದಿಪ್, ನೆ.ಯೋ.ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ಹೇಮಂತ್ಕುಮಾರ್, ಉದ್ಯಮಿ ನಾಗೇಶ್, ರವಿಕುಮಾರ್ ಹಾಗೂ ವಿವಿಧ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.