ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಅಧಿಕಾರ ಹಂಚಿಕೆ ಸಂಬಂಧ ರಾಜಕೀಯ ನಾಯಕರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಸ್ಥಾನ ಪಲ್ಲಟ ವಿಚಾರವಾಗಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ದೇವರಲ್ಲಿ ಕೋರಿಕೆ ಸಲ್ಲಿಸಲು ತಾಲೂಕು ಒಕ್ಕಲಿಗರ ಸಂಘ ನಿರ್ಧರಿಸಿದೆ. ಈ ವಿಶೇಷ ಪೂಜೆಯನ್ನು ಬೆಳಗ್ಗೆ 10.30 ಗಂಟೆ ಹಮ್ಮಿಕೊಳ್ಳಲಾಗಿದ್ದು, ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮತ್ತು ರೈತ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ವಿ.ಪಿ.ನಾಗೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.