ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡುವುದನ್ನು ಅಪರಾಧ ಅಥವಾ ನಿರ್ಲಕ್ಷ್ಯದ ಚಾಲನೆ ಎಂದು ನೇರವವಾಗಿ ಪರಿಗಣಿಸಲು ಸಾಧ್ಯವಿಲ್ಲ. ಸುರಕ್ಷತಾ ಮಿತಿಯನ್ನು ಮೀರಿ ವಾಹನ ಚಲಾಯಿಸಲಾಗಿದೆ ಎಂಬುದನ್ನು ಪ್ರಾಸಿಕ್ಯೂಷನ್ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಸಾಬೀತುಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಪಘಾತ ಪ್ರಕರಣವೊಂದರಲ್ಲಿ ಕಾರು ಚಾಲಕರೊಬ್ಬರಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದೆ.