ಉತ್ತಮ ಆರೋಗ್ಯ ಹೊಂದಲು ಕ್ರೀಡೆ ಸಹಕಾರಿಯಾಗಲಿದೆ. ಶಿಕ್ಷಕರು ಇದರ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಬಿಇಒ ಎನ್.ವೆಂಕಟೇಶಪ್ಪ ತಿಳಿಸಿದರು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ತಾಲೂಕು ದೈಹಿಕ ಶಿಕ್ಷಣದ ಪರಿವೀಕ್ಷಕ ರಂಗನಾಥ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಯಾಡಬೇಕು. ಇಂದು ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೂ ಉದ್ಯೋಗದೊಂದಿಗೆ ಎಲ್ಲ ಕ್ಷೇತ್ರಗಳಲ್ಲೂ ಮಾನ್ಯತೆ ಹಾಗೂ ಹಣ ಸಂಪಾದನೆಗೆ ಸಾಕಷ್ಟು ಅವಕಾಶಗಳಿವೆ ಎಂದರು.
ಪ್ರಭಾರ ಮುಖ್ಯಶಿಕ್ಷಕ ಎಸ್.ಆರ್.ಸುರೇಂದ್ರ, ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣದ ಪರಿವೀಕ್ಷಕ ನಟರಾಜ್, ಇಸಿಒ ನಾರಾಯಣಸ್ವಾಮಿ, ತಾಲೂಕು ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಸಿ.ವೆಂಕಟರಾಯಪ್ಪ, ತಾಲೂಕು ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಆರ್.ರಮೇಶ್, ತಾಲೂಕು ಪ್ರಾ.ಶಾ.ಶಿ. ಸಂಘದ ಕಾರ್ಯದರ್ಶಿ ಈಶ್ವರಪ್ಪ, ನಾಗಭೂಷಣ ಇತರು ಇದ್ದರು.