ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅವಶ್ಯ / DEVANAHALLI

ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಬಯಪ ಅಧ್ಯಕ್ಷ ವಿ.ಶಾಂತಕುಮಾರ್​, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್​, ಬಯಪ ಅಧ್ಯಕ್ಷ ವಿ.ಶಾಂತಕುಮಾರ್​,  ಪುರಸಭೆ ಮಾಜಿ ಅಧ್ಯಕ್ಷ ಎ.ಎನ್​.ವಸಂತಬಾಬು ಇತರರು ಇದ್ದರು.
ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಬಯಪ ಅಧ್ಯಕ್ಷ ವಿ.ಶಾಂತಕುಮಾರ್​, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್​, ಬಯಪ ಅಧ್ಯಕ್ಷ ವಿ.ಶಾಂತಕುಮಾರ್​, ಪುರಸಭೆ ಮಾಜಿ ಅಧ್ಯಕ್ಷ ಎ.ಎನ್​.ವಸಂತಬಾಬು ಇತರರು ಇದ್ದರು.
Published on
ದೇವನಹಳ್ಳಿ : ಮಕ್ಕಳಲ್ಲಿನ ಪ್ರತಿಭೆ ಹೊರತರುವಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಬಯಪ ಅಧ್ಯಕ್ಷ ವಿ.ಶಾಂತಕುಮಾರ್​ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಕ್ರೀಡಾ ಮತ್ತು ಸಾಂಸತಿಕ ಸಂಘ, ದೇವನಹಳ್ಳಿ ಜೆಸಿಐ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಸಮಾರೋಪ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇಸಿಗೆ ಶಿಬಿರಗಳಲ್ಲಿ ಭಾಗವಹಿ-ಸುವುದರಿಂದ ಮಕ್ಕಳಲ್ಲಿ ಸುಪ್ತ ಪ್ರತಿಭೆ ಅನಾವರಣಗೊಳಿಸ-ಬಹುದು ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಜಗನ್ನಾಥ್​ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದೈಹಿಕ ಚಟುವಟಿಕೆಗಳು ಅಗತ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ಬೇಸಿಗೆ ರಜೆಯಲ್ಲಿ ಮಕ್ಕಳು ಇಂತಹ ಶಿಬಿರಗಳಲ್ಲಿ ಭಾಗವಹಿಸುವು-ದರಿಂದ ಕ್ರೀಡಾಸ್ಫೂರ್ತಿ ಬೆಳೆಯುತ್ತದೆ. ನಾಯಕತ್ವ ಗುಣ, ಮಾರ್ಗದರ್ಶನ ಸಾಮರ್ಥ್ಯ ಹಾಗೂ ಶಿಸ್ತು ಬೆಳೆಯಲು ಕ್ರೀಡೆ ಸಹಕಾರಿ ಎಂದು ಹೇಳಿದರು.
ದೇವನಹಳ್ಳಿ ಕ್ರೀಡಾ ಮತ್ತು ಸಾಂಸತಿಕ ಸಂಘದ ನೂತನ ಅಧ್ಯಕ್ಷರಾಗಿ ಜಿ.ಎ.ರವೀಂದ್ರ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೆ ಪ್ರೋತ್ಸಾಹಿಸಲಾಗುವುದು ಎಂದರು.
ಸಂಘದ ಅಧ್ಯಕ್ಷ ಪ್ರಸನ್ನಹಳ್ಳಿ ಎಸ್​.ವಿಜಯ್​ ಕುಮಾರ್​ ಮಾತನಾಡಿ, ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಮಕ್ಕಳು ಸೃಜನಾತ್ಮಕ ಚಟುವಟಿಕೆ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು. ಕ್ರೀಡಾ ಮತ್ತು ಸಾಂಸತಿಕ ಸಂಘದ ಅಧ್ಯಕ್ಷ ವಿಜಯಕುಮಾರ್​, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಸಿ.ಎಂ.ವೆಂಕಟೇಶ್​, ದೇವನಹಳ್ಳಿ ಜೆಸಿಐ ಸಂಸ್ಥೆ ಅಧ್ಯಕ್ಷ ಡಿ.ಎನ್​.ಸುರೇಶ್​, ಉಪಾಧ್ಯಕ್ಷ ಜಗದೀಶ್​ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net