ಸಚಿವ ಜಮೀರ್ ಅಹ್ಮದ್ ಮಾತನಾಡಿ, ಕ್ರೀಡೆಗಳು ದೈಹಿಕ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಲಿದೆ.ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತಾಗಬೇಕು. ಕ್ರೀಡೆಯಲ್ಲಿ ಸೋಲು-ಗೆಲವು ಸಹಜ. ಒತ್ತಡದ ಕೆಲಸಗಳ ನಡುವೆಯೂ ಕ್ರೀಡೆ, ದೈಹಿಕ ವ್ಯಾಯಾಮಗಳಿಗೆ ಆದ್ಯತೆ ನೀಡುವಂತಾಗಬೇಕು. ಕ್ರೀಡೆಗಳು ಸಂಘಟನಾ ಶಕ್ತಿ ಮತ್ತು ಒಗ್ಗಟ್ಟಿನ ಗುಣ ಬೆಳೆಸಲಿದೆ ಎಂದರು.