ಕ್ರೀಡಾ ಮನೋಭಾವ ಅಗತ್ಯ

ಕಲಬುರಗಿ ಚಂದ್ರಶೇಖರ ಪಾಟೀಲ್​ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್​ ಚಾಲನೆ ನೀಡಿದರು. ಶಶೀಲ್​ ನಮೋಶಿ, ಬಿ.ಫೌಜಿಯಾ ತರನ್ನುಮ್​, ಬಸವರಾಜ ಬಳೂಂಡಗಿ, ಮಹೇಶ ಹೂಗಾರ,  ಲಕ್ಷ$್ಮಣ ಶೃಂಗೇರಿ, ಡಾ.ಅಂಬಾರಾಯ ರುದ್ರವಾಡಿ, ಡಾ.ಶರಣಬಸಪ್ಪ ಕ್ಯಾತನಾಳ, ಡಾ.ಸಿದ್ದು ಪಾಟೀಲ್​, ಸಂಗಮೇಶ್ವರ, ಆಶಾ ಹೆಗಡೆ ಇತರರಿದ್ದರು.
ಕಲಬುರಗಿ ಚಂದ್ರಶೇಖರ ಪಾಟೀಲ್​ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್​ ಚಾಲನೆ ನೀಡಿದರು. ಶಶೀಲ್​ ನಮೋಶಿ, ಬಿ.ಫೌಜಿಯಾ ತರನ್ನುಮ್​, ಬಸವರಾಜ ಬಳೂಂಡಗಿ, ಮಹೇಶ ಹೂಗಾರ, ಲಕ್ಷ$್ಮಣ ಶೃಂಗೇರಿ, ಡಾ.ಅಂಬಾರಾಯ ರುದ್ರವಾಡಿ, ಡಾ.ಶರಣಬಸಪ್ಪ ಕ್ಯಾತನಾಳ, ಡಾ.ಸಿದ್ದು ಪಾಟೀಲ್​, ಸಂಗಮೇಶ್ವರ, ಆಶಾ ಹೆಗಡೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಲ್ಲಮಪ್ರಭು ಪಾಟೀಲ್​ ಹೇಳಿಕೆ
  • ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ
ಕಲಬುರಗಿ: ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಮನೋಭಾವ ಹೊಂದಿರಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್​ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ್​ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ನೌಕರರು ಕೆಲಸದ ಒತ್ತಡ ಮಧ್ಯೆ ಇಂತಹ ಕ್ರೀಡೆ, ಸಾಂಸತಿಕ ಚಟುವಟಿಕೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು ಎಂದರು.
ವಿಧಾನ ಪರಿಷತ್​ ಸದಸ್ಯ ಶಶೀಲ್​ ನಮೋಶಿ ಹಾಗೂ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಬಲೂನ್​ ಹಾರಿಸುವ ಮೂಲಕ ಕಾರ್ಯಕ್ರಮದ ಶುಭಾರಂಭ ಮಾಡಿದರು.
ರಾಕೇಶ ಚವ್ಹಾಣ, ಅರುಣಕುಮಾರ, ನಾಗರಾಜ, ಭೀಮರಡ್ಡಿ ಹಾಗೂ ಬಾಳನಗೌಡ ಕ್ರೀಡಾಜ್ಯೋತಿ ಹಸ್ತಾಂತರಿಸಿದರು. ಸಂದ ಖಜಾಂಚಿ ಶ್ರೀಮಂತ ಪಟ್ಟೇದಾರ ಪ್ರತಿಜ್ಞಾವಿಧಿ ಬೋಧಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ ಪ್ರಾಸ್ತಾವಿಕ ಮಾತನಾಡಿ, ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸತಿಕ ಸ್ಪರ್ಧೆಗಳಿಗೆ 2050 ಮಂದಿ ಆನ್​ಲೈನ್​ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀೆಯಲ್ಲಿ ಶಿಕ್ಷಕರು ಅನೇಕ ತೊಂದರೆಯ ಮಧ್ಯೆಯೂ ಯಶಸ್ವಿಗೊಳಿಸಿರುವುದು ಶ್ಲಾನೀಯ. ಅನೇಕರು ಖಾಲಿ ಹುದ್ದೆಗಳ ಪ್ರಭಾರದಲ್ಲಿಯೇ ಕೆಲಸ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿಗಳು ಅನುಕೂಲ ಮಾಡಿಕೊಟ್ಟಿರುವುದಕ್ಕೆ ಕೃತತೆ ಸಲ್ಲಿಸುವುದಾಗಿ ಹೇಳಿದರು.
ಸಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಹೂಗಾರ ಸ್ವಾಗತಿಸಿದರು. ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆಶಾ ಹೆಗಡೆ ನಿರೂಪಿಸಿ, ವಂದಿಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ$್ಮಣ ಶೃಂಗೇರಿ, ಡಾ.ಅಂಬಾರಾಯ ರುದ್ರವಾಡಿ, ಡಿಎಚ್​ಓ ಡಾ.ಶರಣಬಸಪ್ಪ ಕ್ಯಾತನಾಳ, ಆರ್​ಸಿಎಚ್​ ಅಧಿಕಾರಿ ಡಾ.ಸಿದ್ದು ಪಾಟೀಲ್​, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ್ವರ, ಗೌರವ ಅಧ್ಯಕ್ಷ ಸುರೇಶ ಶರ್ಮಾ, ರಾಜ್ಯ ಪರಿಷತ್​ ಸದಸ್ಯ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷ ಎಂ.ಬಿ.ಪಾಟೀಲ, ಸುರೇಶ ವಗ್ಗೆ, ರಾಜ್ಯ ಸಂಟನಾ ಕಾರ್ಯದರ್ಶಿ ಶಿವಶಂಕರಯ್ಯ ಮಠಪತಿ, ಸಿದ್ಧಲಿಂಗಯ್ಯ ಮಠಪತಿ, ವಿಭಾಗೀಯ ಉಪಾಧ್ಯಕ್ಷ ನಿಜಲಿಂಗಪ್ಪ ಕೋರಳ್ಳಿ, ವಿಭಾಗೀಯ ಉಪಾಧ್ಯಕ್ಷ ನಿಜಲಿಂಗಪ್ಪ ಮಾನ್ವಿ, ರಾಜ್ಯ ಪರಿಷತ್​ ಸದಸ್ಯ ಸಂತೋಷ ಸಲಗರ, ಜಿಲ್ಲಾ ಸಂಟನಾ ಕಾರ್ಯದರ್ಶಿ ಡಿ.ಕೆ.ರಾಜರತ್ನ ಇತರರಿದ್ದರು.
"

ಪ್ರತಿ ಕ್ರೀಡೆಯಲ್ಲೂ ಸೋಲು, ಗೆಲುವು ಸಾಮಾನ್ಯ. ಗೆಲುವಿನಿಂದ ಹಿಗ್ಗದೆ, ಸೋಲಿನಿಂದ ಕುಗ್ಗದೆ ಭಾಗವಹಿಸಲು ಹಿಂದೇಟು ಹಾಕಬಾರದು. ಸೋಲು ಗೆಲುವಿನ ಮೆಟ್ಟಿಲು. ಹೀಗಾಗಿ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು.

ಅಲ್ಲಮಪ್ರಭು ಪಾಟೀಲ್​,ಶಾಸಕ, ಕಲಬುರಗಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net