

ಪ್ರಮುಖ ಮುಖ್ಯಾಂಶಗಳು
ಯಮಕನಮರಡಿ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ವಿಜಯವಾಣಿ ಸುದ್ದಿಜಾಲ ದಡ್ಡಿ :
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಆಗುತ್ತದೆ ಎಂದು
ಹುಕ್ಕೇರಿ ತಾಲೂಕಿನ ಮೋದಗಾ ಗ್ರಾಮದ ಮಾಧ್ಯಮಿಕ ವಿದ್ಯಾಲಯ ಶಾಲೆಯಲ್ಲಿ ಈಚೆಗೆ ನಡೆದ ಯಮಕನಮರಡಿ ವಲಯ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಸ್ತು, ಸಹನೆ ಮತ್ತು ಸೋಲು-ಗೆಲುವು ಸಮನಾಗಿ ಸ್ವೀಕರಿಸುವ ಗುಣಗಳನ್ನು ಕ್ರೀಡೆಯಲ್ಲಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಬಾಬು ಪಾಟೀಲ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಬಿ. ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಕೆ. ಪಾಟೀಲ, ಶಿಕ್ಷಣ ಸಂಯೋಜಕ ಗೋವಿಂದ ದಿಕ್ಷಿತ, ತಾಲೂಕು ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಸುತಾರ, ಸಿಆರ್‌ಪಿ ಎಂ.ಎಂ.ಪೂಜೇರ ಮುಖಂಡರಾದ ಶರದ ಪಾಟೀಲ, ದಯಾನಂದ ಪಾಟೀಲ ಇತರರು ಇದ್ದರು.