ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಿ / NELAMANGAL

ನೆಲಮಂಗಲ ಪವಾಡ ಶ್ರೀ ಬಸವಣ್ಣದೇವರಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಕನ್ನಡ ವಿಷಯದಲ್ಲಿ ಶೇ.100 ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಬಸವನಹಳ್ಳಿ ಶಿವಾನಂದಾಶ್ರಮದ ಶ್ರೀ ರಮಣಾನಂದನಾಥ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಎನ್​.ಗಣೇಶ್​, ಎನ್​ಪಿಎ ಮಾಜಿ ಅಧ್ಯಕ್ಷ ಎಂ.ನಾರಾಯಣಗೌಡ ಇತರರು ಇದ್ದರು.
ನೆಲಮಂಗಲ ಪವಾಡ ಶ್ರೀ ಬಸವಣ್ಣದೇವರಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಕನ್ನಡ ವಿಷಯದಲ್ಲಿ ಶೇ.100 ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಬಸವನಹಳ್ಳಿ ಶಿವಾನಂದಾಶ್ರಮದ ಶ್ರೀ ರಮಣಾನಂದನಾಥ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಎನ್​.ಗಣೇಶ್​, ಎನ್​ಪಿಎ ಮಾಜಿ ಅಧ್ಯಕ್ಷ ಎಂ.ನಾರಾಯಣಗೌಡ ಇತರರು ಇದ್ದರು.
Published on
ನೆಲಮಂಗಲ : ಭಾಷೆ ಹಾಗೂ ಸಾಹಿತ್ಯಕ್ಕೆ ವರ್ಷಗಳ ಇತಿಹಾಸವಿದೆ. ಇಂದಿನ ಹಾಗೂ ಮುಂದಿನ ಮಕ್ಕಳಿಗೆ ಸಾಹಿತ್ಯದ ಅರಿವು ಮೂಡಿಸಿ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಬೇಕು ಎಂದು ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಹೇಳಿದರು.
ನಗರದ ಬಸವಣ್ಣ ದೇವರ ಮಠದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್​ ತಾಲೂಕು ಘಟಕದಿಂದ ಆಯೋಜಿಸಿದ್ದ ಕಸಾಪ ಸಂಸ್ಥಾಪನಾ ದಿನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಕನ್ನಡ ಅಪಾಯದಲ್ಲಿ ಇಲ್ಲ, ಸಮಾಜದ ಅನೇಕರು ಅಪಾಯಕ್ಕೆ ಕಾರಣವಾಗುತ್ತಿದ್ದಾರೆ. ಕಸಾಪ ಮತ್ತಷ್ಟು ಬಲವಾಗಿ ಮನೆಮನದಲ್ಲಿ ಸಾಹಿತ್ಯ ತಲುಪುವಂತೆ ಮಾಡಬೇಕು. ಕನ್ನಡಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಾಧನೆ ಮಾಡಿ ನಿಮ್ಮಂತಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಹಕಾರ ನೀಡುವ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ನೆ.ಯೋ.ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ನಾಗರಾಜು ಮಾತನಾಡಿ, ಕ್ಷೇತ್ರದ ಶಾಸಕರ ಬಳಿ ಚರ್ಚಿಸಿ ಶೀಘ್ರದಲ್ಲಿ ಕನ್ನಡ ಭವನ ನಿಮಾರ್ಣಕ್ಕೆ ಜಾಗ ಮೀಸಲಿರಿಸಲಾಗುವುದು. ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ ನೀಡುವ ಸಾಧನವಾಗಲಿ. ಈ ನಿಟ್ಟಿನಲ್ಲಿ ಪರೀಕ್ಷೆಗೂ ಮುನ್ನವೇ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಮಾಡಿರದ 4500 ಸಾವಿರ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ ಗೌರವಿಸಿದ್ದು, ಈಗಾಗಲೇ ಫಲಿತಾಂಶದಲ್ಲೂ ಗಣನೀಯ ಏರಿಕೆ ಕಂಡಿದ್ದೇವೆ. ಕಸಾಪದಿಂದ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿ ಎಂದರು.
ಪ್ರತಿಭಾ ಪುರಸ್ಕಾರ : ತಾಲೂಕಿನಾದ್ಯಂತ ಎಸ್​ಎಸ್​ಎಲ್​ಸಿ ಕನ್ನಡ ಭಾಷೆಯಲ್ಲಿ 125 ಅಂಕ ಪಡೆದ 41 ವಿದ್ಯಾರ್ಥಿಗಳಿಗೆ, ಪಿಯುಸಿಯಲ್ಲಿ 100 ಅಂಕ ಪಡೆದ 25 ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎನ್​ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು ಎಲ್ಲ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಿದರು. ತಾಲೂಕಿನಲ್ಲಿ ಕನ್ನಡ ಭಾಷಾ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದ ಸುಮಯ್ಯ ಅಂಜುಮ್​ಗೆ ಅಭಿನಂದನೆ ಸಲ್ಲಿಸಲಾಯಿತು. ಜತೆಗೆ ಕವಿಗೋಷ್ಟಿ ಆಯೋಜನೆ ಮಾಡಲಾಗಿತ್ತು ಎಂದು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್​ಮೂರ್ತಿ ಮಾಹಿತಿ ನೀಡಿದರು.
ಟಿಎಪಿಸಿಎಂಎಸ್​ ಅಧ್ಯಕ್ಷ ಹನುಮಂತರಾಜು, ಕುಮುಧ್ವತಿ ಸಂಸ್ಥೆ ಮಾಲೀಕ ಚಿಕ್ಕಹನುಮೇಗೌಡ, ಹಿರಿಯ ಸಾಹಿತಿ ಡಾ.ಚೌಡಯ್ಯ, ಲಕ್ಷಿ$್ಮಶ್ರೀನಿವಾಸ್​, ಬಿಇಒ ಕೆ.ಸಿ.ರಮೇಶ್​, ಜಿಲ್ಲಾ ಪದಾಧಿಕಾರಿ ಮಂಜುಳಾಸಿದ್ದರಾಜು, ಉಪನ್ಯಾಸಕ ಡಾ.ಗಂಗರಾಜು, ಗೌರವಾಧ್ಯಕ್ಷ ಸದಾನಂದ ಆರಾಧ್ಯ, ಭಾನುಪ್ರಕಾಶ್​, ಪದಾಧಿಕಾರಿ ವಿಜಯ್​ಹೊಸಪಾಳ್ಯ, ಬೂದಿಹಾಳ್​ಕಿಟ್ಟಿ, ಸಿದ್ದಯ್ಯ, ಮಲ್ಲೇಶ್​, ಬೈಲೇಗೌಡ ಮುಖಂಡ ಮನುಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net