6ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

ಅರಸಿಕೆರೆ ತಾಲೂಕಿನ ಗಂಡಸಿ ಹೋಬಳಿಯ ಮುದುಡಿ ಗ್ರಾಮದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವುದು.
ಅರಸಿಕೆರೆ ತಾಲೂಕಿನ ಗಂಡಸಿ ಹೋಬಳಿಯ ಮುದುಡಿ ಗ್ರಾಮದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವುದು.
Published on
ಅರಸೀಕೆರೆ ಗ್ರಾಮಾಂತರ: ಹೋಬಳಿಯ ಮುದುಡಿ ಗ್ರಾಮದಲ್ಲಿ ಲೋಕಕಲ್ಯಾಣಾರ್ಥವಾಗಿ ಜೂನ್ 6ರಂದು ಸಂಜೆ ಶ್ರೀದೇವಿ ಭೂದೇವಿಯೊಂದಿಗೆ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಶ್ರೀವಾರಿ ಫೌಂಡೇಷನ್ ಎಸ್.ವೆಂಕಟೇಶ್‌ಮೂರ್ತಿ ಅವರ ನೇತೃತ್ವದ ಆಗಮಿಕರ ತಂಡ ಶ್ರೀನಿವಾಸ ಕಲ್ಯಾಣೋತ್ಸವ ನಡೆಸಿಕೊಡಲಿದ್ದು, ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶ್ರೀದೇವಿ ಭೂದೇವಿ ಸಮೇತನಾದ ಶ್ರೀನಿವಾಸನ ಅನುಗ್ರಹಕ್ಕೆ ಪಾತ್ರರಾಗುವಂತೆ ಮನವಿ ಮಾಡಿದರು.
ಲಕ್ಷ್ಮೀ ಮತ್ತು ಪದ್ಮಾವತಿಯನ್ನು ವರಿಸುವ ಶ್ರೀನಿವಾಸನ ಕಲ್ಯಾಣೋತ್ಸವ ಕಣ್ತುಂಬಿಕೊಳ್ಳುವುದು ಬದುಕಿನ ಸಾರ್ಥಕ ಕ್ಷಣಗಳಲ್ಲಿ ಒಂದಾಗಿದೆ. ಇಂತಹ ಅಪೂರ್ವ ಅವಕಾಶವನ್ನು ಭಕ್ತರು ಸದುಪಯೋಗ ಪಡೆದುಕೊಳ್ಳುವ ಮೂಲಕ ಶ್ರೀದೇವಿ ಭೂದೇವಿ ಸಮೇತನಾದ ಶ್ರೀನಿವಾಸನ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಿದರು.
ಕಲ್ಯಾಣೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಆಯೋಜನ ಸಮಿತಿ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ಸಹ ಆಯೋಜಿಸಲಾಗಿದೆ ಎಂದರು. ಟ್ರಸ್ಟ್ ಪದಾಧಿಕಾರಿಗಳಾದ ಗುಂಡೂರಾವ್, ನಾಗೇಂದ್ರ, ಶಿವಪ್ಪ, ಕುಮಾರ್, ಜಯಣ್ಣ, ಜಯಸಿಂಹ,ಪ್ರಸಾದ್, ಶಾಂತ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net