ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ೆ.17ರಂದು ಸುದ್ದಿಗೋಷ್ಠಿಯಲ್ಲಿ 15,941 ಶಾಲೆಗಳ 8,12,855 ಹೊಸಬರು, 62,845 ಪುನರಾವರ್ತಿತ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದರು. ಆದರೆ, ಬುಧವಾರ ಏಕಾಏಕಿ 8,65,988 ವಿದ್ಯಾರ್ಥಿಗಳು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರೂ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. 37 ಸಾವಿರ ವಿದ್ಯಾರ್ಥಿಗಳ ಮಾಹಿತಿ ನೀಡದಿರುವುದು ಮಾತ್ರ ಆತಂಕ ಮತ್ತು ಇಲಾಖೆ ಬಗ್ಗೆ ಅನುಮಾನ ಬರುವಂತಾಗಿದೆ.