ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ: ವೇಳಾಪಟ್ಟಿ ಬದಲು ಮಾ.31ಕ್ಕೆ ನಿಗದಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
Published on
ಬೆಂಗಳೂರು: ರಾಜ್ಯ ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರಿಂದ ಮಾ.30ಕ್ಕೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಮಾ.30ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ನಿಗದಿಪಡಿಸಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಇನ್ನುಳಿದಂತೆ ಯಾವುದೇ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇರುವುದಿಲ್ಲ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಏ.2ರಂದು ಸಮಾಜ ವಿಜ್ಞಾನ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net