ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ

ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಗ್ರಾಹಕರು ಸಾಲಿನಲ್ಲಿ ನಿಂತಿರುವುದು.
ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಗ್ರಾಹಕರು ಸಾಲಿನಲ್ಲಿ ನಿಂತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಬ್ಯಾಂಕ್ ಸಿಬ್ಬಂದಿ ಕೊರತೆ
  • ಗ್ರಾಹಕರ ಆಗ್ರಹ
ದೇವರಹಿಪ್ಪರಗಿ: ಸಮೀಪದ ಜಾಲವಾದ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಹೆಚ್ಚಿನ ಸಿಬ್ಬಂದಿ ನೇಮಿಸಬೇಕೆಂದು ಗ್ರಾಹಕರು ಆಗ್ರಹಿಸಿದ್ದಾರೆ.
ಸ್ಥಳೀಯ ಬ್ಯಾಂಕ್ ರೈತ ಸಮುದಾಯಕ್ಕೆ ಆಧಾರವಾಗಿದ್ದು, ಸಿಬ್ಬಂದಿ ಕೊರತೆಯಿಂದ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಹಣ ಪಡೆಯಲು ನಿತ್ಯ ಕಾಯುವುದು ಅನಿವಾರ್ಯವಾಗಿದೆ.
ಈ ಬಗ್ಗೆ ಬ್ಯಾಂಕಿನ ಹಿರಿಯ ಅಧಿಕಾರಿಗಳಿಗೆ ವಿನಂತಿ ಮಾಡಿದರೂ ಪ್ರಯೋಜನವಾಗಿಲ್ಲ. ಕೂಡಲೇ ಹೆಚ್ಚುವರಿ ಸಿಬ್ಬಂದಿ ನೇಮಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳಾದ ಭೀಮರಾಯ ಮನಗೂಳಿ, ಸಲೀಮ್ ಮುಲ್ಲಾ, ಧರೇಶ ಪಾಟೀಲ, ಚಂದ್ರಾಮ ಗಾಂಜಿ, ರಾಜು ಕಲಕೇರಿ, ಡಿ.ಎ. ಇನಾಮದಾರ ಸೇರಿ ರೈತರು, ಗ್ರಾಹಕರು ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net