ಭಾರತದ ಪ್ರಮುಖ ಉದ್ಯಮವಾಗಿದ್ದ ಎಚ್ಎಂಟಿಯು ಬೆಂಗಳೂರ್ ನಗರವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಕೇರಳದ ಕಾಲಮಸ್ಸೆರಿ, ತೆಲಂಗಾಣದ ಹೈದರಾಬಾದ್, ಹರಿಯಾಣದ ಪಿಂಜೋರಾ ಸೇರಿದಂತೆ ಅನೇಕ ಭಾಗಗಳಲ್ಲಿ ಕಾರ್ಖಾನೆಗಳನ್ನು ಹೊಂದಿದೆ. ಒಂದು ಕಾಲದಲ್ಲಿ ಇಡೀ ದೇಶದಲ್ಲೇ ಪ್ರತಿಷ್ಠಿತ ಮತ್ತು ಲಾಭದಾಯಕ ಉದ್ಯಮವಾಗಿ ನಡೆದ ಹೆಚ್ಎಂಟಿ ಈಗ ಕಷ್ಟದ ಪರಿಸ್ಥಿತಿಯಲ್ಲಿದೆ. ಹಾಗಿದ್ದರೂ ಬಾಹ್ಯಾಕಾಶ, ರಕ್ಷಣೆ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಯಂತ್ರಗಳನ್ನು ತಯಾರಿಸಿ ಕೊಡುತ್ತಿದೆ. ಈಗಲೂ ವಿದೇಶಗಳಲ್ಲಿ ಹೆಚ್ಎಂಟಿ ಯಂತ್ರಗಳಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಹೆಚ್ಎಂಟಿ ವಾಚ್ ಗಳಿಗೆ ಈಗಲೂ ವಿಪರೀತ ಡಿಮಾಂಡ್ ಇದೆ. ಇಂತಹ ಕೈಗಾರಿಕೆಗಳನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡುವುದು ಬಿಟ್ಟು ಅವುಗಳ ಅವಸಾನಕ್ಕೆ ರಾಜ್ಯ ಸರಕಾರ ಯತ್ನಿಸುತ್ತಿರುವ ಸರಿಯಲ್ಲ. ಈ ಮಾತನ್ನು ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.