ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿಯಮಗಳಿಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಏ.10ರಂದೇ ರಾಜ್ಯ ಸರ್ಕಾರ ತನ್ನ ವಿಶೇಷ ಗೆಜೆಟ್ನಲ್ಲಿ ಪ್ರಕಟಿಸಿದೆ. ಇದನ್ನು ನ್ಯಾಯಾಲಯದ ಗಮನಕ್ಕೆ ತರದೆ ಅರ್ಜಿದಾರರು ಆದೇಶ ಪಡೆದಿದ್ದಾರೆ. ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಸತ್ಯಾಂಶ ಮರೆಮಾಚಿ ಅರ್ಜಿದಾರರು ಮನವಿ ಸಲ್ಲಿಸಿದ್ದರು ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.