ಇಂಧನ ಸಂರಕ್ಷಣೆ ಕುರಿತು ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ

ಆಯ್ಕೆಯಾದ ವಿದ್ಯಾರ್ಥಿಗಳಿಗೆ ನವದೆಹಲಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ
P.S. Kumar, President of the Lalit Kala Akademi, and Dr. Satishkumar S. Hosamani, Director of the State Samagra Shikshana (Integrated Education) scheme, with the student winners of a drawing competition held as part of an energy conservation awareness campaign organized by the Union Ministry of Power.
ಕೇಂದ್ರ ಇಂಧನ ಇಲಾಖೆ ಆಯೋಜಿಸಿದ್ದ ಇಂಧನ ಸಂರಕ್ಷಣಾ ಜಾಗೃತಿ ಅಭಿಯಾನದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಪಿ.ಎಸ್. ಕುಮಾರ್ ಹಾಗೂ ರಾಜ್ಯ ಸಮಗ್ರ ಶಿಕ್ಷಣ ನಿರ್ದೇಶಕ ಡಾ. ಸತೀಶ್‌ಕುಮಾರ್ ಎಸ್. ಹೊಸಮನಿ.
Published on: 

ಬೆಂಗಳೂರು : ರಾಷ್ಟ್ರೀಯ ಇಂಧನ ಸಂರಕ್ಷಣಾ ಜಾಗೃತಿ ಅಭಿಯಾನದ ಅಂಗವಾಗಿ ಶಾಲಾ ಮಕ್ಕಳಿಗಾಗಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಬೆಂಗಳೂರು ಕೇಂದ್ರ ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕೇಂದ್ರ ವಿದ್ಯುತ್ ಇಲಾಖೆಯ ಇಂಧನ ದಕ್ಷತೆ ಬ್ಯೂರೋ ವತಿಯಿಂದ ಹಮ್ಮಿಕೊಂಡಿದ್ದ ಈ ಸ್ಪರ್ಧೆಯಲ್ಲಿ 5ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿಯ ಎರಡು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ದ 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ.ಎಸ್. ಕುಮಾರ್ ಹಾಗೂ ರಾಜ್ಯ ಸಮಗ್ರ ಶಿಕ್ಷಣ ನಿರ್ದೇಶಕ ಡಾ. ಸತೀಶ್‌ಕುಮಾರ್ ಎಸ್. ಹೊಸಮನಿ ವಿಜೇತರಿಗೆ ಬಹುಮಾನ ವಿತರಿಸಿದರು.

ಎರಡೂ ವಿಭಾಗಗಳಲ್ಲಿ ಪ್ರಥಮ ಬಹುಮಾನವಾಗಿ ತಲಾ 50 ಸಾವಿರ ರೂ., ದ್ವಿತೀಯ 30 ಸಾವಿರ ರೂ., ತೃತೀಯ 20 ಸಾವಿರ ರೂ. ಹಾಗೂ 10 ಸಮಾಧಾನಕರ ಬಹುಮಾನಗಳಿಗೆ ತಲಾ 7,500 ರೂ. ನಗದು ನೀಡಲಾಯಿತು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಇಂಧನ ಕಿಟ್ ವಿತರಿಸಲಾಯಿತು.

ಎರಡೂ ವಿಭಾಗಗಳ ಪ್ರಥಮ ಮೂರು ಬಹುಮಾನ ವಿಜೇತ ವಿದ್ಯಾರ್ಥಿಗಳು ಡಿ.11ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದಾರೆ.