2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕಗಳ ಆಯ್ಕೆ

ಪ್ರದರ್ಶನ ಹಾಗೂ ಆಕ್ಷೇಪಣೆಗೆ ಅವಕಾಶ
State-level selection of books for the year 2023
2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕಗಳ ಆಯ್ಕೆ
Published on: 

ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನ ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ದಿನಾಂಕ ನಿಗದಿಪಡಿಸಿದೆ

ಅ.12ರಿಂದ 14ರವರೆಗೆ ಪುಸ್ತಕಗಳ ಪ್ರದರ್ಶನವನ್ನು ವಿಜಯನಗರದ ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ’ದ ಗ್ರಂಥಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಅಲ್ಲದೆ, ಆಯ್ಕೆಯಾದ ಎಲ್ಲಾ ಭಾಷೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ಸಾರ್ವಜನಿಕರು ಹಾಗೂ ಲೇಖಕರು ಇಲಾಖೆಯ ಅಧಿಕೃತ ವೆಬ್ಸೈಟ್ : ಟ್ಝ.ಚ್ಟ್ಞಠಿ.ಜಟ.ಜ್ಞಿ ನಲ್ಲೂ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಪುಸ್ತಕ ಆಯ್ಕೆಗೆ ಸಂಬಂಧಿಸಿದಂತೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅ.12 ರಿಂದ 22ರವರೆಗೆ ತಮ್ಮ ಲಿಖಿತ ಮನವಿಗಳನ್ನು ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬಹುದು. ನಂತರ ಬರುವ ಯಾವುದೇ ಮನವಿ, ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತೆ ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net