ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಡಾ. ಶರಣಪ್ರಕಾಶ ಆರ್. ಪಾಟೀಲ
ಡಾ. ಶರಣಪ್ರಕಾಶ ಆರ್. ಪಾಟೀಲ
Published on
ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ರಂದು ಏಪ್ರಿಲ್ 28 ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಸೇಡಂ ತಾಲೂಕಿನ ಮದನಾ ಗ್ರಾಮದಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಯವರ ಮೂಲಕ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸೇಡಂ ತಾಲ್ಲೂಕಿನ ರಾಜ್ಯ ಹೆದ್ದಾರಿ ಎಸ.ಎಚ್ 127 ಮುಧೋಳದಿಂದ ಎಲಗೇರಾ ಆಂಧ್ರಪ್ರದೇಶ ಗಡಿಯವರೆಗೆ ಕಿ.ಮೇ. 9.26 ರಿಂದ 13.86ವರೆಗೆ ರಸ್ತೆ ಸುಧಾರಣೆ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಸಂಜೆ 5 ಗಂಟೆಗೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಸೇಡಂ ಛಲವಾದಿ ಸಮಾಜದವರ ವತಿಯಿಂದ ಸೇಡಂ ನಗರದಲ್ಲಿ ಏರ್ಪಡಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 8.45 ಗಂಟೆಗೆ ಕಲಬುರಗಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net