ಕಲಬುರಗಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಬ್ರಿ ತಾಲೂಕಿನ ಮುದ್ರಾಡಿಯ ಹಿರಿಯ ಮುಖಂಡ ಮಂಜುನಾಥ ಪೂಜಾರಿ ಅವರಿಗೆ ರಾಜ್ಯ ಸರ್ಕಾರ ಇದೀಗ ರಾಜ್ಯ ಸಚಿವ ದರ್ಜೆ ಸ್ಥಾನಮಾನ ನೀಡಿ ಆದೇಶಿಸಿದ್ದು, ಸರ್ಕಾರದ ಈ ನಿರ್ಧಾರವನ್ನು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದೆ.