ಕಾವೇರಿ ನೀರು ಬಿಟ್ಟರೆ ರಾಜ್ಯಾದ್ಯಂತ ಹೋರಾಟ Protest

ತಮಿಳುನಾಡಿಗೆ Protest ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಫದ ಗುಬ್ಬಿ ಶಾಖೆಯ ಸದಸ್ಯರು ತಹಸೀಲ್ದಾರ್​ ಆರತಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ತಾಲೂಕು ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಸಿ.ಟಿ.ಕುಮಾರ್​, ಮಂಜುನಾಥ್​, ಗುರು ಚನ್ನಬಸಪ್ಪ, ದೇವೇಗೌಡ, ಬಸವರಾಜು ಇತರರಿದ್ದರು.
ತಮಿಳುನಾಡಿಗೆ Protest ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಫದ ಗುಬ್ಬಿ ಶಾಖೆಯ ಸದಸ್ಯರು ತಹಸೀಲ್ದಾರ್​ ಆರತಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ತಾಲೂಕು ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಸಿ.ಟಿ.ಕುಮಾರ್​, ಮಂಜುನಾಥ್​, ಗುರು ಚನ್ನಬಸಪ್ಪ, ದೇವೇಗೌಡ, ಬಸವರಾಜು ಇತರರಿದ್ದರು.
Published on
ಗುಬ್ಬಿ: ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ನಮಗೆ ಕುಡಿಯುವ ನೀರಿನ ಸಮಸ್ಯೆ ಇರುವಾಗ Protest ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನಿರ್ದೇಶನ ನೀಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಸ್ತುತ ವಸ್ತು ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡದ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಫದ ತಾಲೂಕು ಶಾಖೆಯ ಸದಸ್ಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಬಸ್​ ನಿಲ್ದಾಣ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರ ಹಿತ ಕಾಯುವಂತೆ ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಸಕಾಲಕ್ಕೆ ಮಳೆಯಾಗದೆ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ನಗರ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ನೀರು ಬರಿದಾಗಿದೆ. ಇಂತಹ ದುಸ್ಥಿತಿಯಲ್ಲಿ ನೆರೆ ರಾಜ್ಯ ತಮಿಳುನಾಡಿಗೆ 15 ದಿನಗಳ ಕಾಲ ಸುಮಾರು 4 ಟಿಎಂಸಿ ನೀರು ಬಿಡಲು ಆದೇಶ ನೀಡಿರುವುದು ಅವೈಜ್ಞಾನಿಕ. ಮುಂಗಾರು ಮಳೆ ಕೈಕೊಟ್ಟಿದೆ. ಸತ್ಯ ತಿಳಿದಿದ್ದರೂ ಸಮಿತಿ ಈ ರೀತಿಯ ಆದೇಶ ಹೊರಡಿಸಿದೆ. ಮಾನವೀಯತೆ ಮರೆತು ನೀರು ಹರಿಸಲು ಹೇಗೆ ಸಾಧ್ಯ ಎಂಬುದು ಸರ್ಕಾರ ಮನವರಿಕೆ ಮಾಡಬೇಕಿದೆ ಎಂದು ಕಿಡಿಕಾರಿದರು.
ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ನೀರಿನ ಲಭ್ಯತೆ ಅರಿತು ತಮಿಳುನಾಡಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ವೇಳೆ ಸರ್ಕಾರ ಒತ್ತಾಯಕ್ಕೆ ಮಣಿದು ಕೆಆರ್​ಎಸ್​ ಡ್ಯಾಂನಿಂದ ನೀರು ಹರಿಬಿಡುವ ದುಸ್ಸಾಹಸಕ್ಕೆ ಮುಂದಾದಲ್ಲಿ ರೈತ ಸಂಘದಿಂದ ರಾಜ್ಯಾದ್ಯಂತ ಬೃಹತ್​ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರ ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್​ ಆರತಿ ಬಿ., ಈಗಾಗಲೇ ರಾಜ್ಯದಲ್ಲಿ ಬರಗಾಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ನಿರ್ದೇಶನ ನೀಡಿದ್ದು, ಜನ&ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.
ಮುಖಂಡರಾದ ಮಹಾದೇವಯ್ಯ, ವರ್ತಕರ ಸಂಘದ ದಯಾನಂದ್​, ಮಾಜಿ ಸೈನಿಕರ ಸಂಘದ ವಿವೇಕಾನಂದ, ಜೈದೇವ್​ ಇತರರಿದ್ದರು.
ಕಾವೇರಿ ಸಮಿತಿ ರೈತರ ಪರಿಸ್ಥಿಯನ್ನು ಖುದ್ದು ಅವಲೋಕಿಸುವುದು ಬಿಟ್ಟು ನಿರ್ದೇಶನ ನೀಡುವುದು ಎಷ್ಟರ ಮಟ್ಟಿಗೆ ಸರಿ. ಜತೆಗೆ ರಾಜ್ಯದ ಬರಗಾಲದ ಪರಿಸ್ಥಿತಿಯನ್ನು ನೆರೆಯ ರಾಜ್ಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ಜಲಾನಯನ ಪ್ರದೇಶದ ಹೇಮಾವತಿ ನೀರು ಸಹ ತಮಿಳುನಾಡಿಗೆ ಹರಿಸುವ ಸಾಧ್ಯತೆ ಹೆಚ್ಚಿದೆ. ನಮ್ಮ ಜಿಲ್ಲೆಯ ನೀರೂ ಅತ್ತ ಹರಿದರೆ ಅಚ್ಚರಿ ಪಡುವಂತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ರೈತರು ಕಾವೇರಿ ಹೋರಾಟಕ್ಕೆ ಧುಮುಕಬೇಕು.
-ಸಿ.ಜಿ.ಲೋಕೇಶ್​, ಪ್ರಧಾನ ಕಾರ್ಯದರ್ಶಿ, ರೈತಸಂಘ, ಗುಬ್ಬಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net