ಅಗತ್ಯ ವೈದ್ಯರ ನೇಮಕಕ್ಕೆ ಕ್ರಮ

ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭಾನುವಾರ ಜಿಲ್ಲಾಧಿಕಾರಿ ಎಸ್. ಪೂವಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳ ತಜ್ಞ ಡಾ. ಶರಣಪ್ಪ, ಉದ್ಯೋಗಿ ಗಿರಿಯಪ್ಪ ಇತರರಿದ್ದರು.
ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭಾನುವಾರ ಜಿಲ್ಲಾಧಿಕಾರಿ ಎಸ್. ಪೂವಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳ ತಜ್ಞ ಡಾ. ಶರಣಪ್ಪ, ಉದ್ಯೋಗಿ ಗಿರಿಯಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾನ್ವಿಯಲ್ಲಿ ಜಿಲ್ಲಾಧಿಕಾರಿ ಎಸ್. ಪೂವಿಕಾ ಹೇಳಿಕೆ
ಮಾನ್ವಿ: ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್. ಪೂವಿಕಾ ಮೂಲಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು. 
ವಿವಿಧ ವಾರ್ಡ್‌ಗಳಿಗೆ ತೆರಳಿ ಗರ್ಭಿಣಿಯರು ಮತ್ತು ಬಾಣಂತಿಯರೊಂದಿಗೆ ಸಮಾಲೋಚಿಸಿ ಚಿಕಿತ್ಸೆ ಹಾಗೂ ಸ್ವಚ್ಛತೆ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಹೆರಿಗೆ ಕೋಣೆ, ಶಸ್ತ್ರಚಿಕಿತ್ಸಾ ಕೊಠಡಿಗಳು, ಶೌಚಗೃಹಗಳನ್ನು ಪರಿಶೀಲಿಸಿದರು. 
ಮಕ್ಕಳ ತಜ್ಞ ಡಾ.ಶರಣಪ್ಪ ಅವರಿಂದ ಆಸ್ಪತ್ರೆಯಲ್ಲಿ ದಾಖಲಾದ ಹೆರಿಗೆ ಹಾಗೂ ಗರ್ಭಿಣಿಯರ ಸಾವಿನ ಸಂಖ್ಯೆ ಹಾಗೂ ಜಿಲ್ಲಾಸ್ಪತ್ರೆಗೆ ಶಿಫಾರಸು ಮಾಡಿರುವ ಗರ್ಭಿಣಿಯರ ಸಂಖ್ಯೆ, ಹಾಸಿಗೆ ಸಂಖ್ಯೆ, ಕಟ್ಟಡಗಳ ಅಗತ್ಯತೆ, ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಗತ್ಯವಿರುವ ಶಸ್ತ್ರಚಿಕಿತ್ಸಾ ಕೊಠಡಿ, ಗರ್ಭಿಣಿಯರಿಗೆ ಅಗತ್ಯವಿರುವ ಸ್ಕಾೃನಿಂಗ್ ತಂತ್ರಜ್ಞರ ನೇಮಕ, ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದರು. 
"

ಮಾನ್ವಿ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕುರಿತು ಅನೇಕ ದೂರುಗಳು ಬರುತ್ತಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

— ಎಸ್. ಪೂವಿಕಾ ಜಿಲ್ಲಾಧಿಕಾರಿ, ರಾಯಚೂರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net