ನಂಜನಗೂಡನ್ನು ಮಾದರಿ ಕ್ಷೇತ್ರವನ್ನಾಗಿಸಲು ಕ್ರಮ

1.80 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿ ಪೂಜೆ ನೆರವೇರಿಸಿದರು.
1.80 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿ ಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದರ್ಶನ್ ಧ್ರುವನಾರಾಯಣ
  • 1.80 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ನಂಜನಗೂಡು: ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವುದೇ ನನ್ನ ಮೊದಲ ಆದ್ಯತೆಯಾಗಿದ್ದು, ಇದಕ್ಕಾಗಿ ಅನುದಾನದ ಕೊರತೆ ಎದುರಾಗಿಲ್ಲ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.
ತಾಲೂಕಿನ ವಿವಿಧ ಭಾಗಗಳಲ್ಲಿ 1.80 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಮಾತನಾಡಿದರು.
ಗ್ಯಾರಂಟಿಗಳಿಗೆ ಹಣ ಒದಗಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ರಾಜ್ಯದ ಅಭಿವೃದ್ಧಿ ಹೇಗೆ ಮಾಡುತ್ತಾರೆ ಎನ್ನುವ ಆರೋಪಗಳನ್ನು ವಿರೋಧ ಪಕ್ಷದವರು ಪ್ರತಿ ಸಮಾರಂಭದಲ್ಲಿ ಮಾಡುತ್ತಾರೆ. ಕ್ಷೇತ್ರದಲ್ಲಿ ಸುಮಾರು 1000 ಕೋಟಿ ರೂ.ಗೂ ಹೆಚ್ವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಅನೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕಾಮಗಾರಿಗಳು ನಡೆಯಲಿದೆ. ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳ ಕ್ಷೇತ್ರಕ್ಕೆ ಅನುದಾನದ ಹೊಳೆಯನ್ನೇ ಹರಿಸಿದ್ದಾರೆ ಎಂದರು.
ತಾಲೂಕಿನ ಎಚ್.ಕೊಂಗಳ್ಳಿ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಕೂಡ್ಲಾಪುರ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಮಲ್ಲಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿ, ಎಲಚಗೆರೆ ಗ್ರಾಮದ ಸಾಮನ್ಯ ವರ್ಗದ ಬೀದಿಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿದ್ದಶೆಟ್ಟಿ, ಮಲ್ಲಹಳ್ಳಿ ನಾರಾಯಣ, ಮುದ್ದುಮಾದ ಶೆಟ್ಟಿ, ವೀರೇಂದ್ರ, ನಿರಂಜನ್‌ಮೂರ್ತಿ, ನಾಗರಾಜ್, ಶ್ರೀಧರ್, ವಿಜಯ್‌ಕುಮಾರ್, ಮಹೇಶ್, ಪೊನ್ನನಾಯಕ, ಪರಮೇಶ್ವರಪ್ಪ, ಶಿವಕುಮಾರ್ ದೇವರಾಜ್, ನಾಗೇಶ್, ಜವರನಾಯಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net