ಸ್ಟಿಂಗ್ ಆಪರೇಷನ್; ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ವಿರುದ್ಧದ ಯಾವುದೇ ಮಾನಹಾನಿಕಾರಕ ವಿಷಯಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published on: 

ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ವಿರುದ್ಧದ ಯಾವುದೇ ಮಾನಹಾನಿಕಾರಕ ವಿಷಯಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸೋಮವಾರ(ಅ. 12) ಬೆಂಗಳೂರಿನ 18ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ವಕೀಲ ಪ್ರವೀಣ್ ಕಾಮತ್ ಮೂಲಕ ಮಾಜಿ ಸಿಎಂ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ವಿವಾದಿತ ವಿಡಿಯೋ ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಹಂಚಿಕೊಳ್ಳದಂತೆ ಮತ್ತು ಪ್ರಸಾರ ಮಾಡದಂತೆ ಅರ್ಜಿಯಲ್ಲಿ ಕೋರಿದ್ದಾರೆ.

ಅರ್ಜಿಯಲ್ಲಿ ನ್ಯೂಸ್ ಚಾನಲ್​ಗಳು, ಪತ್ರಿಕೆಗಳು ಸೇರಿದಂತೆ 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳಾಗಿ ಹೆಸರಿಸಲಾಗಿದೆ. ಇಂದು ಅರ್ಜಿಯ ವಿಚಾರಣೆ ನಡೆಯಲಿದ್ದು ನ್ಯಾಯಾಲಯ ತನ್ನ ಆದೇಶ ನೀಡುವ ಸಾಧ್ಯತೆಯಿದೆ.

Also Read
ಪ್ರಧಾನಿ ಮೋದಿ ವಿರುದ್ಧ ಚೌಕಿದಾರ್ ಚೋರ್ ಹೈ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್ | Rahul Gandhi
ಸಿಎಂ ಸಿದ್ದರಾಮಯ್ಯ

ಸೋಮವಾರ ತಡರಾತ್ರಿ ಈ ಕುರಿತು ಮಾತನಾಡಿರುವ ಸಿದ್ದರಾಮಯ್ಯನವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ತಡೆಯಾಜ್ಞೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ

ಇನ್ನೂ ತಡೆಯಾಜ್ಞೆ ತರುವುದರ ಕುರಿತು ಮಾತನಾಡಿರುವ ಸಿದ್ದರಾಮಯ್ಯನವರ ಪುತ್ರ ಮತ್ತು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಜಾಲತಾಣದಲ್ಲಿ ಕೆಲವರು ಸುಳ್ಳು ಆರೋಪ ಮಾಡಿದ್ದಾರೆ. ಜನರು ಅದನ್ನೇ ನಿಜ ಎಂದು ತಿಳಿದುಕೊಳ್ಳುತ್ತಾರೆ. ಆ ವಿಡಿಯೋ ಹಾಕಿದವರ ಮೇಲೆ ಕ್ರಮ ಆಗಬೇಕು ಎಂದು ತಂದೆ ಹೇಳಿದ್ದಾರೆ. ಸ್ಟೇ ಮಾತ್ರವಲ್ಲ, ಸುಳ್ಳು ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಕೇಸ್ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾಜಿ ಸಿಎಂ ಸೇರಿ ಹಲವರ ಮೇಲೆ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು, ಅದಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್​ ನಡುವೆ ವಾಗ್ವಾದ ನಡೆಯುತ್ತಿದ್ದು, ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net