ವೈದ್ಯಕೀಯ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ಬಳ್ಳಾರಿ ಬಿಮ್ಸ್ ಆವರಣದಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ ಅಂಗವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿದರು.
ಬಳ್ಳಾರಿ ಬಿಮ್ಸ್ ಆವರಣದಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ ಅಂಗವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಮ್ಸ್ ಆವರಣದಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ
  • ಹೃದಯದ ಆರೋಗ್ಯದ ಕುರಿತು ಜಾಗೃತಿ
ಬಳ್ಳಾರಿ: ಬಿಮ್ಸ್ ಆವರಣದಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ ಅಂಗವಾಗಿ ಭಾರತೀಯ ಶಸ್ತಚಿಕಿತ್ಸಕರ ಸಂಘದಿಂದ ಮಂಗಳವಾರ ಬೀದಿ ನಾಟಕ ಪ್ರದರ್ಶನ ನಡೆಯಿತು.
ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಪ್ರಥಮ, ದ್ವಿತೀಯ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ತುರ್ತು ಚಿಕಿತ್ಸಾ ವಿಭಾಗಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಬೀದಿ ನಾಟಕವನ್ನು ವೀಕ್ಷಿಸಿದರು. ಕೆಎಸ್‌ಸಿಎಎಸ್‌ಐ ಶಾಖೆಯ ಜಿಲ್ಲಾಧ್ಯಕ್ಷ ಡಾ.ಶೇಕಪ್ಪ ಮಾಳಗಿಮನಿ, ಕಾರ್ಯದರ್ಶಿ ಡಾ.ಗುಡೇಕೋಟೆ ರವಿಕುಮಾರ, ಜಂಟಿ ಕಾರ್ಯದರ್ಶಿ ಡಾ.ಶೈಖ್ ಫರ್ಹಾನ್ ಎಂ.ಬಿ., ಎಎಸ್‌ಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ದಿವಾಕರ್ ಗಡ್ಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net