ಗುರುಮಠಕಲ್ ತಾಲೂಕಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಸಿಲ್ ರಾಸಾಯಿನಿಕ ಕಂಪನಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಬುಧವಾರ ಭೇಟಿ ನೀಡಿದರು. ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವ ಬಾಬುರಾವ ಚಿಂಚನಸೂರ, ಡಿಸಿ ರಾಹುಲ್ ಪಾಂಡ್ವೆ, ಎಸ್‌ಪಿ ಪೃಥ್ವಿಕ್ ಶಂಕರ್ ಇತರರಿದ್ದರು.
ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಮಿಕಲï -Á್ಯಕ್ಟರಿಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ಗಂಭೀರವಾಗಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಬುಧವಾರ ಮಧ್ಯಾಹ್ನ ಘಟನೆ ನಡೆದ ಸಿಲ್ ರಾಸಾಯಿನಿಕ ಕಂಪನಿಗೆ ಭೇಟಿ ನೀಡಿದ ಅವರು, ದುರ್ಘಟನೆ ನಡೆದ ಸ್ಥಳ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ¯್ಲÁಽಕಾರಿಯಿಂದ ಘಟನೆ ಕುರಿತು ವರದಿ ಕೇಳಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಽಕಾರಿಗಳಿಗೆ ತನಿಖೆ ನಡೆಸಿ ಎ-ïಐಆರ್ ದಾಖಲಿಸುವಂತೆ ಸೂಚಿಸಲಾಗಿದೆ ಎಂದರು.
ಸುರಕ್ಷತಾ ಕ್ರಮಗಳ ಉಲ್ಲಂಘನೆ ನಡೆದಿದೆಯೇ, ಯಾರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಅಲ್ಲದೆ ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಕೈಗಾರಿಕಾ ಇಲಾಖೆಯೂ ಪ್ರತ್ಯೇಕ ವರದಿ ಸಲ್ಲಿಸಲಿದ್ದು, ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲು ಜಿ¯್ಲÁಡಳಿತ ಮತ್ತು ಸಂಬAಽತ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಕೆಲಸಕ್ಕಾಗಿ ಬಂದ ಕಾರ್ಮಿಕರು ಜೀವ ಕಳೆದುಕೊಳ್ಳುವುದು ದುರದೃಷ್ಟಕರ. ಇದಕ್ಕೆ ಹೊಣೆಗಾರರಾದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು. ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿ, ಎಂದು ಸಚಿವರು ಹೇಳಿದರು.
ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲ ಕೈಗಾರಿಕೆಗಳಲ್ಲೂ ಸುರಕ್ಷತಾ ಮಾನದಂಡ, ಕಾರ್ಮಿಕ ಕಾನೂನು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳ ಪಾಲನೆ ಕುರಿತು ವಿಶೇಷ ತಂಡದಿAದ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಕೆಮಿಕಲï ಕೈಗಾರಿಕೆಗಳ ವಿರುದ್ಧ ವ್ಯಕ್ತವಾಗಿರುವ ವಿರೋಧದ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಎಲ್ಲ ಸುರಕ್ಷತಾ ಹಾಗೂ ಪರಿಸರ ನಿಯಮ ಪಾಲಿಸುತ್ತಿವೆಯೆ ಎಂಬುದನ್ನು ಸರ್ಕಾರ ಪರಿಶೀಲಿಸಲಿದೆ. ನಿಯಮ ಉಲ್ಲಂಘನೆ ಕಂಡುಬAದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ರೈತರ ವಿರೋಧದ ಹಿನ್ನೆಲೆಯಲ್ಲಿ ಎರಡನೇ ಹಂತದ ಭೂಸ್ವಾಽÃನವನ್ನು ಸರ್ಕಾರ ಈಗಾಗಲೇ ಹಿಂತೆಗೆದುಕೊAಡಿದೆ. ಮುಂದೆಯೂ ಕೈಗಾರಿಕೆಗಳು ಸುರಕ್ಷತಾ ಮಾನದಂಡ ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ನಿಗಾ ವಹಿಸಲಿದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ, ಮಾಜಿ ಸಚಿವ ಬಾಬುರಾವ ಚಿಂಚನಸೂರ, ಡಿಸಿ ರಾಹುಲ್ ಪಾಂಡ್ವೆ, ಎಸ್‌ಪಿ ಪೃಥ್ವಿಕ್ ಶಂಕರ್ ಇತರರಿದ್ದರು.
ಸೂಕ್ತ ಕ್ರಮಕ್ಕೆ ಕಂದಕೂರ ಒತ್ತಾಯ
ಸಚಿವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಕಾನೂನು ಉಲ್ಲಂöಸಿ ಕಂಪನಿಗಳು ನಡೆಸಲಾಗುತ್ತಿದ್ದು, ಈ ಬಗ್ಗೆ ಅನೇಕ ಸಲ ಸಂಬAಧಪಟ್ಟ ಸಚಿವ, ಅಽಕಾರಿಗಳಗೆ ಹೇಳಿದರೂ ಏನು ಕ್ರಮ ಆಗದ ಕಾರಣ ಇಂದು ಇಂತಹ ಘಟನೆ ಸಂಭವಿಸಿದೆ ಎಂದರು. ಕೈಗಾರಿಕಾ ಪ್ರದೇಶ ಸೇರಿ ಸುತ್ತಲಿನ ಹಳ್ಳಿಗಳ ಜನರ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಕಾರಣ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಸಚಿವರಿಗೆ ಒತ್ತಾಯಿಸಿದರು.