ನಿಷೇಧಿತ ಪ್ಲಾಸ್ಟಿಕ್​ ಬಳಸಿದರೆ ನಿರ್ಧಾಣ್ಯ ಕ್ರಮ plastic ban

ನಿಷೇಧಿತ ಪ್ಲಾಸ್ಟಿಕ್​ ಬಳಸಿದರೆ ನಿರ್ಧಾಣ್ಯ ಕ್ರಮ plastic ban
ನಿಷೇಧಿತ ಪ್ಲಾಸ್ಟಿಕ್​ ಬಳಸಿದರೆ ನಿರ್ಧಾಣ್ಯ ಕ್ರಮ plastic ban
Published on

ಪ್ರಮುಖ ಮುಖ್ಯಾಂಶಗಳು

  • ವೇಮಗಲ್​&ಕುರುಗಲ್​ ಪಪಂ ಮುಖ್ಯಾಧಿಕಾರಿ ವೆಂಕಟೇಶ್​ ಎಚ್ಚರಿಕೆ
  • ಅಂಗಡಿ&ಮುಂಗಟ್ಟುಗಳ ಮೇಲೆ ದಾಳಿ
ವೇಮಗಲ್:ವೇಮಗಲ್​&ಕುರುಗಲ್​ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಪಟ್ಟಣದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಮಿಂಚಿನ ದಾಳಿ ನಡೆಸಿ, ವಿವಿಧ ಅಂಗಡಿ ಮುಂಗಟ್ಟುಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 50 ಕೆಜಿಗೂ ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್​ ವಶಪಡಿಸಿಕೊಂಡರು.plastic ban
ಪಟ್ಟಣದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡ ಈ ಕಟ್ಟುನಿಟ್ಟಿನ ಕ್ರಮವು ಪ್ಲಾಸ್ಟಿಕ್​ ಮಾರಾಟಗಾರರು ಮತ್ತು ಬಳಕೆದಾರರಲ್ಲಿ ಜಾಗೃತಿ ಉಂಟು ಮಾಡಿದ್ದಲ್ಲದೇ, ಕೆಲವರಿಗೆ ದಂಡದ ಆತಂಕ ಎದುರಾಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ಎಸ್​. ವೆಂಕಟೇಶ್​ ಮಾತನಾಡಿ, ಪ್ಲಾಸ್ಟಿಕ್​ಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಯಾವುದೇ ನಿರ್ಧಾಣ್ಯವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರಸ್ತುತ ಮೊದಲ ಹಂತದಲ್ಲಿ ಪ್ಲಾಸ್ಟಿಕ್​ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಹಂತದಲ್ಲಿ ನಿಷೇಧಿತ ಪ್ಲಾಸ್ಟಿಕ್​ ವಸ್ತುಗಳನ್ನು ಬಳಸುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯ ಸಿ.ಎಸ್​. ವೆಂಕಟೇಶ್​ ಮಾತನಾಡಿ, ಪ್ಲಾಸ್ಟಿಕ್​ ಬಳಕೆಯು ಕೇವಲ ಪರಿಸರ ಮಾಲಿನ್ಯಕ್ಕೆ ಸೀಮಿತವಾಗಿಲ್ಲ, ಅದು ಒಟ್ಟಾರೆ ಪಟ್ಟಣದ ಸೌಂದರ್ಯವನ್ನು ಹಾಳುಗೆಡವುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ಲಾಸ್ಟಿಕ್​ನಿಂದಾಗಿ ಚರಂಡಿಗಳು ಬ್ಲಾಕ್​ ಆಗಿ ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿ ನಾಗರಿಕನೂ ಪ್ಲಾಸ್ಟಿಕ್​ ಬದಲಿಗೆ ಬಟ್ಟೆ ಚೀಲಗಳನ್ನು ಬಳಸುವ ಮೂಲಕ ಪರಿಸರಸ್ನೇಹಿ ಜೀವನಶೈಲಿ ರೂಢಿಸಿಕೊಳ್ಳಬೇಕು ಮತ್ತು ಪಟ್ಟಣ ಪಂಚಾಯಿತಿಯ ಈ ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net