ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮ student

student  ಮುಳಬಾಗಿಲಿನ ಪಲ್ಲಿಗರಪಾಳ್ಯದ ವೀರಭದ್ರಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೆಚ್ಚು ಅಂಕಗಳಿಸಿದ ಪಿಯುಸಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ ರಂಜಿತ್​ ಕುಮಾರ್​, ಮುಖಂಡರಾದ ಬಾಬು, ವಿಶ್ವನಾಥ, ಶಾಂತಮ್ಮ, ಶಂಕರಣ್ಣ, ಚಂದ್ರಶೇಖರ, ಪರಮೇಶ್ವರನ್​ ಇದ್ದರು.
student ಮುಳಬಾಗಿಲಿನ ಪಲ್ಲಿಗರಪಾಳ್ಯದ ವೀರಭದ್ರಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೆಚ್ಚು ಅಂಕಗಳಿಸಿದ ಪಿಯುಸಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ ರಂಜಿತ್​ ಕುಮಾರ್​, ಮುಖಂಡರಾದ ಬಾಬು, ವಿಶ್ವನಾಥ, ಶಾಂತಮ್ಮ, ಶಂಕರಣ್ಣ, ಚಂದ್ರಶೇಖರ, ಪರಮೇಶ್ವರನ್​ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ರಂಜಿತ್​ ಕುಮಾರ್​ ಹೇಳಿಕೆ
ಮುಳಬಾಗಿಲು; ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮತ್ತಷ್ಟು ಸಾಧನೆಗೈಯ್ಯವ ಉದ್ದೇಶದಿಂದ student ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ, ವಕೀಲ ರಂಜಿತ್​ ಕುಮಾರ್​ ಹೇಳಿದರು.
ನಗರದ ಪಲ್ಲಿಗರಪಾಳ್ಯದ ವೀರಭದ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವೀರಶೈವ ಲಿಂಗಾಯಿತ ಸಮುದಾಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ತಾಲೂಕಿನಲ್ಲಿ ಸಮುದಾಯದವರು ಕಡಿಮೆ ಸಂಖ್ಯೆಯಲ್ಲಿದ್ದರೂ ಸಹ ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು. ಮುಂದಿನ ದಿನಗಳಲ್ಲಿ ಹಲವಾರು ರೀತಿಯ ಕಾರ್ಯಕ್ರಮಗಳ ರೂಪುರೇಷೆಗೆ ಸಾಧ್ಯವಾಗುತ್ತದೆ. ಹಾಗಾಗಿ ವೀರಶೈವ ಲಿಂಗಾಯಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಮುದಾಯದಲ್ಲಿ ಹಲವಾರು ರೀತಿಯ ಪ್ರತಿಭೆ ಹೊಂದಿರುವ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲಾಗುತ್ತದೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕಾಗುತ್ತದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದರು.
ಪಿಯುಸಿ ವಿದ್ಯಾರ್ಥಿಗಳಾದ ಕೃತಿಕಾ, ಸಂಜನಾ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ಪುನೀತ್​, ಎಸ್​.ಅಂಬಿಕಾ, ಶಂಕರ್​ ಪ್ರಸಾದ್​, ಸಾಯಿಕೃಷ್ಣ, ಕೌಶಿಕ್​, ಜಶ್ವಂತ್​, ತೇಜಸ್​ ಆರಾಧ್ಯ, ಚರಣ್​ ತೇಜ್​, ಹರ್ಷಪ್ರಿಯ, ಬಿಂದು ಅವರನ್ನು ಸನ್ಮಾನಿಸಲಾಯಿತು.
ಮುಖಂಡರಾದ ಮಹೇಶ್​, ಚಂದನಾ, ವೀಣಾ, ಶಿವಕುಮಾರ್​, ರಾಜು, ರಾಜಣ್ಣ, ಶಿಕ್ಷಕರಾದ ಭಾಗ್ಯವಂತಯ್ಯ, ಮಂಜುನಾಥ, ರಾಜೇಶ್ವರಿ, ವೀರಭದ್ರಸ್ವಾಮಿ ದೇವಾಲಯ ಅರ್ಚಕ ಪಿ.ಎಂ.ದೇವಯ್ಯಸ್ವಾಮಿ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net