ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ: ಸಭೆಗೆ ಡೇಟ್ ಫಿಕ್ಸ್ ಮಾಡಿದ ಸರ್ಕಾರ
ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ:
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ದೃಷ್ಟಿಯಿಂದ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ
ಈ ಸಂಬಂಧ ಇದೇ 13ರಂದು ಸಮಿತಿಯ ಮೊದಲ ಸಭೆ ನಡೆಯಲಿದೆ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಕೆ
ಬೆಂಗಳೂರು: ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ದೃಷ್ಟಿಯಿಂದ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಹೊಂದಲಾಗಿದೆ. ಈ ಸಂಬಂಧ ಇದೇ 13ರಂದು ಸಮಿತಿಯ ಮೊದಲ ಸಭೆ ನಡೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಕೆಇಎ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಸಮಿತಿ ರಚಿಸಿದ್ದು, ನನ್ನನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಬಿ. ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್.ಎಸ್. ಮಂಜುನಾಥ್ ಗೌಡ, ಕೀರ್ತಿ ಗಣೇಶ್ ಇದ್ದಾರೆ ಎಂದು ಮಾಹಿತಿ ನೀಡಿದರು.