ವಿದ್ಯಾರ್ಥಿಗಳೇ ರ್ನಿಭಿತಿಯಿಂದ ಪರೀಕ್ಷೆ ಎದುರಿಸಿ

Students, face the exam with confidence.
Students, face the exam with confidence.
Published on
ಮಧುಗಿರಿ: ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೀಡಾಗದೇ ರ್ನಿಭಿತಿಯಿಂದ ಪರೀಕ್ಷೆ ಎದುರಿಸುವಂತೆ ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ರಾಜಣ್ಣ ಕರೆ ನೀಡಿದರು.
ಪಟ್ಟಣದ ಕೆ.ಆರ್​ ಬಡಾವಣೆಯಲ್ಲಿ ಸೋಮವಾರ ಸುಮಾರು 55 ಲಕ್ಷ ರೂ. ಹೆಚ್ಚುವರಿ ಶಾಲಾ ಕೊಠಡಿ ನಿಮಾರ್ಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಆರಂಭಗೊಂಡಿದ್ದು, ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಗೊಂದಲಕ್ಕೀಡಾಗದೇ ಗೊತ್ತಿರುವ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಪರೀಕ್ಷೆ ಎದುರಿಸಿ ಎಂದು ಸಲಹೆ ನೀಡಿದರು.
ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ದುಶ್ಚಟಗಳಿಗೆ ಗಮನಹರಿಸದೇ ಓದಿನತ್ತ ಗಮನ ಹರಿಸಿ. ಪ್ರತಿಯೊಬ್ಬರೂ ಉನ್ನತ ಮಟ್ಟದ ಪದವಿ ಪಡೆಯುವಂತೆ ಕರೆ ನೀಡಿದರು. ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಆಸನಗಳ ಕೊರತೆಯಿರುವುದು ಗಮನಕ್ಕೆ ಬಂದಿದ್ದು, ಅದನ್ನು ಕಲ್ಪಿಸಿಕೊಡುವ ಭರವಸೆ ನೀಡಿದರು.
ಡಿಡಿಪಿಐ ಮಾಧವರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಲಾಗಿದ್ದು, ಹೆಚ್ಚಿನ ದಾಖಲಾತಿಗಳಾದಲ್ಲಿ ಶಿಕ್ಷಕರಿಗೂ ಉತ್ತಮವಾಗಿ ಬೋಧನೆಗೆ ಅನುಕೂಲವಾಗಲಿದೆ. ಪಾಲಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ಶಾಲೆ ಬೆಳವಣಿಗೆಗೆ ಸಹಕರಿಸುವಂತೆ ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್​, ಎಂ.ಕೆ ನಂಜುಂಡರಾಜು, ಪುರಸಭೆ ಮಾಜಿ ಸದಸ್ಯರಾದ ಶಂಕರ್​ ನಾರಾಯಣ್​, ಶ್ರೀಧರ್​, ಪ್ರಥಮ ದರ್ಜೆ ಗುತ್ತಿಗೆದಾರರಾದ ವೆಂಕಟ್​ ಕೃಷ್ಣಾರೆಡ್ಡಿ, ರಾಧಾ ಶಾಮ್​, ಚಿನ್ನಪ್ಪ ರೆಡ್ಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net