ಬಸವಕಲ್ಯಾಣ: ರಾಷ್ಟ್ರೀಯ ಆದಾಯ ಆಧಾರಿತ ಪ್ರತಿಭಾ ವಿದ್ಯಾರ್ಥಿ ವೇತನ (ಎನ್ಎಂಎಂಎಸ್) ಪರೀಕ್ಷೆಯಲ್ಲಿ ತಾಲೂಕಿನ ರಾಜೋಳ ಗ್ರಾಮದ ಪಿಎಂ ಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ತಾಲೂಕಿನಿಂದ ಒಟ್ಟು 43 ವಿದ್ಯಾರ್ಥಿಗಳು ಪಾಸಾಗಿದ್ದು, ಇದರಲ್ಲಿ 32 ವಿದ್ಯಾರ್ಥಿಗಳು ರಾಜೋಳ ಪಿಎಂ ಶ್ರೀ ವಿದ್ಯಾಲಯದ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಲಯದ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.