ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಆಯೋಜಿಸಿದ್ದ ವಿದ್ಯಾ ಸಂಭ್ರಮ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಮತ್ತು ನಾಗರಿಕರ ಆರ್ಥಿಕ ಸ್ಥಿತಿ ಸುಧಾರಣೆಗೆ ವಿದ್ಯೆ ಒಂದೇ ಮಾರ್ಗ. ವಿದ್ಯೆ ಪತ್ರಿ ಮಕ್ಕಳ ಹಕ್ಕು. ಅದರ ಜ್ಞಾನ ಪಡೆದಾಗಲೇ ದೇಶ ಮತ್ತು ಜನತೆಯ ಅಭಿವೃದ್ಧಿ ಸಾಧ್ಯ. ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿ ಪಡಿಸಿವೆ. ಪ್ರಸ್ತುತ ಪ್ರಾಥಮಿಕ ಹಂತ ಶಿಕ್ಷಣಕ್ಕೆ ಹೆಚ್ಚಿನ ಪ್ರಮುಖ್ಯ ನೀಡಲಾಗಿದ್ದು, ಮಕ್ಕಳ ಉನ್ನತ ಶಿಕ್ಷಣ ಮೌಲ್ಯ ಆಧಾರಿತವಾಗಿರುತ್ತದೆ ಎಂಬ ಕಾರಣಕ್ಕೆ ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಒತ್ತು ನೀಡಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.