ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಿ

Students, stay away from bad habits.
Students, stay away from bad habits.
Published on
ಗುಬ್ಬಿ: ಹದಿಹರಿಯದ ವಿದ್ಯಾರ್ಥಿಗಳ ಮನಸ್ಸು ಚಂಚಲ್ಯವಾಗಿದ್ದು, ಅದನ್ನು ಹತೋಟಿಯಲ್ಲಿಟ್ಟುಕೊಂಡಲ್ಲಿ ಜೀವನದಲ್ಲಿ ಯಶಸ್ಸು ಕಾಣಬಹುದು ಎಂದು ನ್ಯಾಯಾಧೀಶ ಕಿರಣ್​ ತಿಳಿಸಿದರು.
ಪಟ್ಟಣದಲ್ಲಿರುವ ಎಸ್​.ಆರ್​.ಎ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯಿಂದ ಅಬಕಾರಿ ಇಲಾಖೆ ಸಹಕಾರದೊಂದಿಗೆ ಆಯೋಜಿಸಿದ್ದ ಎನ್​ಡಿಪಿಎಸ್​ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂತ್ರಜ್ಞಾನ ಬದಲಾದಂತೆ ಮನುಷ್ಯ ಬದಲಾಗಬೇಕಾದದ್ದು, ಪ್ರಕೃತಿಯ ನಿಯಮ. ಹಾಗಂತ ಒಳ್ಳೆಯ ವಿಚಾರಗಳನ್ನು ಗಾಳಿಗೆ ತೂರಿ, ದುಶ್ಚಟಗಳಿಗೆ ಮಾರು ಹೋಗುತ್ತಿರುವುದು ಎಷ್ಟು ಸರಿ. ಇತ್ತೀಚಿನ ದಿನಗಳಲ್ಲಿ ಮೊಬೈಲ್​ ಇಲ್ಲದೇ ಜೀವನವೇ ಇಲ್ಲ ಎನ್ನುವ ಮಟ್ಟಿಗೆ ಮೊಬೈಲ್​ಗೆ ಅಡಿಕ್ಟ್​ ಆಗಿದ್ದು, ಇದರಿಂದ ಮಾದಕ ವಸ್ತುಗಳ ಮೇಲೆ ಮಾರು ಹೋಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದರು.
ಅಬಕಾರಿ ನಿರೀಕ್ಷಕ ಶೇಖ್​ ಇಮ್ರಾನ್​ ಮಾತನಾಡಿ, ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ಮಾರುಹೋಗದೆ ಒಳ್ಳೆಯ ವಿಚಾರಗಳನ್ನು ಅಳವಡಿಸಿಕೊಳ್ಳಿ. ಉತ್ತಮ ಜೀವನವನ್ನು ಕಟ್ಟಿಕೊಂಡು ಉತ್ತಮ ಸಮಾಜ ನಿಮಾರ್ಣ ಮಾಡುವ ಕಡೆಗೆ ಗಮನ ಹರಿಸುವಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಪ್ರಾಂಶುಪಾಲ ಸಿ.ಜಿ.ಸತೀಶ್​ ಮಾತನಾಡಿ, ಕಾಲೇಜಿನಲ್ಲಿ ಮದ್ಯ ವ್ಯಸನದಿಂದ ಆಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಹಾಗೂ ಕಾನೂನು ಸೇವಾ ಸಮಿತಿಯಿಂದ ಉತ್ತಮ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.
ಸರ್ಕಾರಿ ಅಭಿಯೋಜಕಿ ಶೋಭಾ, ಪಪಂ ಮಾಜಿ ಸದಸ್ಯ ಜಿ.ಆರ್​.ಶಿವಕುಮಾರ್​, ವಕೀಲರ ಸಂಘದ ಉಪಾಧ್ಯಕ್ಷ ರವೀಂದ್ರ, ಪ್ರಧಾನ ಕಾರ್ಯದರ್ಶಿ ರವೀಶ್​, ಅಬಕಾರಿ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net