ಸಂಸ್ಕೃತ ಭಾಷೆ ಅಧ್ಯಯನದಿಂದ ಏಕಾಗ್ರತೆ ವೃದ್ಧಿ

ಕೊರಟಗೆರೆ ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದಸಂಸ್ಕೃತ ದಿನೋತ್ಸವವನ್ನು ಶ್ರೀ ಡಾ.ಹನುಮಂತನಾಥ ಸ್ವಾಮೀಜಿಉದ್ಘಾಟಿಸಿದರು. ವಿದ್ಯಾನ್ ಎಚ್.ಎನ್.ರಾಮಕೃಷ್ಣಯ್ಯ, ದೊಡ್ಡಲದ ಮರದ ಕೆಎಂಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ನರಸಿಂಹಮೂರ್ತಿ, ಎಲೆರಾಂಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀರಾಮಯ್ಯ ಇದ್ದರು.
ಕೊರಟಗೆರೆ ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದಸಂಸ್ಕೃತ ದಿನೋತ್ಸವವನ್ನು ಶ್ರೀ ಡಾ.ಹನುಮಂತನಾಥ ಸ್ವಾಮೀಜಿಉದ್ಘಾಟಿಸಿದರು. ವಿದ್ಯಾನ್ ಎಚ್.ಎನ್.ರಾಮಕೃಷ್ಣಯ್ಯ, ದೊಡ್ಡಲದ ಮರದ ಕೆಎಂಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ನರಸಿಂಹಮೂರ್ತಿ, ಎಲೆರಾಂಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀರಾಮಯ್ಯ ಇದ್ದರು.
Published on

ಕೊರಟಗೆರೆ :

ಸಂಸ್ಕೃತ ಭಾಷೆ ಕೇವಲ ಸಂವಹನದ ವಾಧ್ಯಮವಲ್ಲ, ಅದು ಭಾರತೀಯ ಜ್ಞಾನ. ಸಂಸ್ಕೃತಿ, ಪರಂಪರೆ, ಆಧ್ಯಾತ್ಮಿಕತೆ ಮತ್ತು ಮೌಲ್ಯಗಳ ಅಮೂಲ್ಯ ನಿಧಿಯಾಗಿದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ಹನುಮಂತನಾಥ ಸ್ವಾಮೀಜಿತಿಳಿಸಿದರು.

ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲಿರುವ ಲಕ್ಷ್ಮೀನರಸಿಂಹಸ್ವಾಮಿ ಸಂಸ್ಕೃತ ವೇದ ಆಗಮ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದಸಂಸ್ಕೃತ ದಿನೋತ್ಸವದಲ್ಲಿ ವಾತನಾಡಿ, ಸಾವಿರಾರು ವರ್ಷಗಳ ಜ್ಞಾನ ಸಂಪತ್ತನ್ನು ತನ್ನೊಳಗೆ ಅಡಗಿಸಿಕೊಂಡಿರುವ ಸಂಸ್ಕೃತ ಭಾಷೆಯ ಅಧ್ಯಯನದಿಂದ ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಏಕಾಗ್ರತೆ ಸೇರಿ ಚಿಂತನಾ ಶಕ್ತಿ ವೃದ್ಧಿಯಾಗುತ್ತದೆ ಎಂದರು.
ಭಾರತೀಯ ಸಂಸ್ಕೃತಿಯ ಮೂಲ ಬೇರುಗಳು ಸಂಸ್ಕೃತ ಭಾಷೆಯಲ್ಲಿವೆ. ವೇದ, ಉಪನಿಷತ್ತು, ಪುರಾಣ, ಶಾಸ, ಸಾಹಿತ್ಯ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಅಪಾರ ಜ್ಞಾನ ಸಂಪತ್ತು ಸಂಸ್ಕೃತದಲ್ಲಿದೆ. ಹೀಗಾಗಿ ಸಂಸ್ಕೃತವನ್ನು ಕೇವಲ ಒಂದು ಭಾಷೆಯಾಗಿ ಪರಿಗಣಿಸದೆ, ಭಾರತೀಯ ಪರಂಪರೆಯ ಜ್ಞಾನ ಭಂಡಾರವಾಗಿ ಗೌರವಿಸಬೇಕು ಎಂದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ.ಸಿ ಪಾಲಯ್ಯ ವಾತನಾಡಿ, ಸಂಸ್ಕೃತ ಭಾಷೆಯನ್ನು ಕೇವಲ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸದೆ, ಅದರಲ್ಲಿರುವ ವೈಜ್ಞಾನಿಕ, ಸಾಹಿತ್ಯಿಕ ಮತ್ತು ತಾತ್ವಿಕ ವಿಚಾರಗಳನ್ನು ಯುವಪೀಳಿಗೆಗೆ ಪರಿಚಯಿಸಬೇಕು. ಭಾಷೆಯ ಉಳಿವು ಮತ್ತು ಬೆಳವಣಿಗೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ಪಾಲಕರು ಸೇರಿ ಸವಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಸಿದ್ದಗಂಗಾ ಮಠದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಸವರಾಜು ವಾತನಾಡಿ, ಪ್ರತಿಯೊಂದು ಭಾಷೆಗೂ ನನ್ನದೇ ಆಸ್ಮಿತೆ ಇರುತ್ತದೆ. ಅದರಲ್ಲೂ ಸಂಸ್ಕೃತ ಭಾಷೆಯು ನಮ್ಮೆಲ್ಲಾ ಭಾರತೀಯ ಭಾಷೆಗಳ ಬೇರು ಇದನ್ನು ನಾವುಗಳು ರಕ್ಷಿಸಬೇಕು ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕ ನಾರಾಯಣ, ಲಕ್ಷ್ಮೀ ನರಸಿಂಹಸ್ವಾಮಿ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಡಾ.ಸಿ.ನಂಜುಂಡಯ್ಯ,ಮಠದ ವ್ಯವಸ್ಥಾಪಕ ಗೋವಿಂದರಾಜು, ಭ್ರಮರಾಂಬಿಕಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net