

ಪ್ರಮುಖ ಮುಖ್ಯಾಂಶಗಳು
ನಕಲಿ ದಾಖಲೆ ಸೃಷ್ಟಿ ಪ್ರಕರಣ
| ಉಪ ನೋಂದಣಿ ಅಧಿಕಾರಿ,ಬಾಂಡ್ ರೈಟರ್ ಬಂಧನ !
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಪ್ರಕರಣ ಸಂಬಂಧಿಸಿದಂತೆ ಹುಕ್ಕೇರಿ ಉಪ ನೋಂದಣಿ ಅಧಿಕಾರಿ ಹಾಗೂ ಬಾಂಡ್ ರೈಟರ್‌ನ್ನು ಹುಕ್ಕೇರಿ ಪೊಲೀಸ್‌ರು ಭಾನುವಾರ ಬಂಧಿಸಿದ್ದಾರೆ.
ಹುಕ್ಕೇರಿ ಉಪ ನೋಂದಣಿ ಅಧಿಕಾರಿ ಮಡಿವಾಳಯ್ಯ ಬಾನಿಮಠ,ಬಾಂಡ್ ರೈಟರ್ ಆನಂದ ದಡ್ಡಿಮನಿ ಬಂಧಿತ ಆರೋಪಿಗಳಾಗಿದ್ದಾರೆ.
ಹುಕ್ಕೇರಿ ತಾಲ್ಲೂಕಿನ ಕುರಣಿ ಗ್ರಾಮದ ಶಿವಾನಂದ ಮಾರುತಿ ಕುದನೂರಿ ಎಂಬುವವರ ಜಮೀನಿನ ನಕಲಿ ದಾಖಲೆ ಸೃಷ್ಟಿಗೆ ಸಂಬಂದಿಸಿದಂತೆ 8 ಜನರ ವಿರುದ್ಧ ಜ.೨೧ ರಂದು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರಲ್ಲಿ ಆನಂದ ದಡ್ಡಿಮನಿ ಎ೭ ಹಾಗೂ ಉಪ ನೋಂದಣಿ ಅಧಿಕಾರಿ ಎ೮ ಆರೋಪಿಗಳಾಗಿದ್ದರು. ಪ್ರಕರಣದಲ್ಲಿ ಆರೋಪಿಗಳು ಬಂಧನ ಭೀತಿಯಿಂದ ತಲೆಬಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳಲ್ಲಿ 3 ಆರೋಪಿಗಳನ್ನು ಬಂಧಿಸಿದ್ದರು.
ಎ೭,ಎ೮ ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಶನಿವಾರಸಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.ಆರೋಪಿಗಳು ಯಮಕನಮರಡಿ ಪೊಲೀಸ್ ಠಾಣೆಗೆ ಆಗಮಿಸಿ ಜಾಮೀನು ಪಡೆಯುವಾಗ ಜಾಮೀನು ಮಂಜೂರಾಗಿ, ಮತ್ತೊಂದು ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬಂಧನ :
ಹುಕ್ಕೇರಿ ಉಪ ನೋಂದಣಿ ಅಧಿಕಾರಿ ಮಡಿವಾಳಯ್ಯ ಬಾನಿಮಠ,ಬಾಂಡ್ ರೈಟರ್ ಆನಂದ ದಡ್ಡಿಮನಿ ಆರೋಪಿಗಳ ಮೇಲೆ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಡೆದ ಮತ್ತೊಂದು ಜಮೀನು ಖರೀದಿಗೆ ಸಂಬಂಧಿಸಿದಂತೆ ಹೊಸ ಪ್ರಕರಣ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಈಚೆಗೆ ನಡೆದಿದೆ ಸೇರಿದೆ. ಹೊಸ ಪ್ರಕರಣ ದಾಖಲಾದ ಮಾಹಿತಿ ತಿಳಿಯದೇ ಯಮಕನಮರಡಿ ಪೊಲೀಸ್ ಠಾಣೆಗೆ ಬಂದಿದ್ದ ಈ ಇಬ್ಬರು ಆರೋಪಿಗಳನ್ನು ಯಮಕನಮರಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಪಡೆದು ಹುಕ್ಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.