ಅಕ್ರಮ ಬೋರ್ಡ್ಗಳನ್ನು ಸಕ್ರಮಗೊಳಿಸುವ ಪ್ರಾಧಿಕಾರದ ಯಾವುದೇ ಪ್ರಕ್ರಿಯೆಯು ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿರುವ ಪೀಠವು, ಜಿಬಿಎಗೆ ಈ ಅರ್ಜಿಗೆ ಸಂಬಂಧಿಸಿದಂತೆ ವಿವರವಾದ ಪ್ರತಿಕ್ರಿಯೆ ದಾಖಲಿಸಲು ಸೂಚಿಸಿದೆ. ನಿಗದಿಪಡಿಸಿದ ಷರತ್ತುಗಳನ್ನು ಉಲ್ಲಂಘಿಸಿ, ವಾಣಿಜ್ಯ ಜಾಹೀರಾತುಗಳನ್ನು ಹಲವು ಪರದೆಗಳಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.