ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸಿಐಟಿ ಕ್ಯಾಟ್ ಉಚಿತ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು, ಅವರು ಸಹ ಉನ್ನತ ಶಿಕ್ಷಣ ಪಡೆಯಬೇಕು ಎಂಬ ಹಂಬಲದಿಂದ ನಾನು 25 ವರ್ಷಗಳ ಹಿಂದೆ ಈ ಕಾಲೇಜು ಆರಂಭಿಸಿದೆ. ಇಲ್ಲಿ ಓದಿರುವ ವಿದ್ಯಾರ್ಥಿಗಳು ಅಮೆರಿಕ, ರಷ್ಯಾ, ಜಪಾನ್ನಂತಹ ದೇಶಗಳಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡಿದಾಗ ಖುಷಿಯಾಗುತ್ತಿದೆ. ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಏಕಾಗ್ರತೆಯಿಂದ ಕಲಿತರೆ ಖಂಡಿತವಾಗಿ ಯಶಸ್ಸು ಲಭಿಸುತ್ತದೆ ಎಂದು ಹೇಳಿದರು.