ಸತತ ಪರಿಶ್ರಮದಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ

ಬಾದಾಮಿ ತಾಲೂಕಿನ ಚಿಕ್ಕ ಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿ ಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ,  ಎಂ.ಬಿ.ದೊಡ್ಡಪ್ಪನವರ, ಅಶೋಕ ಕೊಡಗಲಿ, ಬಿ.ಎಚ್.ಹಳಗೇರಿ, ಎಸ್.ಪಿ.ಗೌಡರ ಇತರರಿದ್ದರು.
ಬಾದಾಮಿ ತಾಲೂಕಿನ ಚಿಕ್ಕ ಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿ ಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ, ಎಂ.ಬಿ.ದೊಡ್ಡಪ್ಪನವರ, ಅಶೋಕ ಕೊಡಗಲಿ, ಬಿ.ಎಚ್.ಹಳಗೇರಿ, ಎಸ್.ಪಿ.ಗೌಡರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಇಒ ಕೇಶವ ಪೆಟ್ಲೂರ ಹೇಳಿಕೆ
  • ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಬಾದಾಮಿ: ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಎನ್‌ಎಂಎಂಎಸ್ ಪರೀಕ್ಷೆ ಉತ್ತೀರ್ಣವಾಗುವ ಮೂಲಕ ಶಿಷ್ಯವೇತನ ಪಡೆಯಬೇಕು. ಇದು ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಹೇಳಿದರು.

ತಾಲೂಕಿನ ಚಿಕ್ಕ ಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಒಂದನೇ ತರಗತಿಯಿಂದಲೇ ಪರೀಕ್ಷೆಗೆ ತಯಾರಿ ನಡೆಸಬೇಕು. ಅಂದಾಗ ಇಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ತಾಲೂಕಿನ 22 ವಿದ್ಯಾರ್ಥಿಗಳು ಪರೀಕ್ಷೆ ತೇರ್ಗಡೆಯಾಗಿ ಪ್ರತಿ ತಿಂಗಳು 1000 ರೂ. ಶಿಷ್ಯ ವೇತನಕ್ಕೆ ಅರ್ಹರಾಗಿದ್ದಾರೆ.
ಅದರಲ್ಲಿ 12 ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಇರುವುದು ಹೆಮ್ಮೆಯ ಸಂಗತಿ. ಮುಂದಿನ ವರ್ಷ ತಾಲೂಕಿನಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಎಂಎಂಎಸ್ ಪರೀಕ್ಷೆ ತೇರ್ಗಡೆಯಾಗಲು ತಾಲೂಕಿನ ಎಲ್ಲ ಶಿಕ್ಷಕರು ಶ್ರಮವಹಿಸಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನವರ, ಉಪನ್ಯಾಸಕ ಅಶೋಕ ಕೊಡಗಲಿ, ಪರಿವೀಕ್ಷಕ ಬಿ.ಎಚ್. ಹಳಗೇರಿ, ನೋಡಲ್ ಅಧಿಕಾರಿ ಎಸ್.ಪಿ. ಗೌಡರ, ಪ್ರಭಾರಿ ಪ್ರಾಚಾರ್ಯ ಶಂಕರರಾವ ಕುಲಕರ್ಣಿ, ಎಸ್‌ಡಿಎಂಸಿ ಅಧ್ಯಕ್ಷ ಶಿವಯ್ಯ ಹಿರೇಮಠ, ವೈ.ವೈ. ದಳವಾಯಿ, ರಮೇಶ ಕತ್ತಿಕೈ, ಸಂಗಮೇಶ ಉಳ್ಳಾಗಡ್ಡಿ, ಬಸವರಾಜ ಸಿಂದಗಿಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net