ಜೀವನದಲ್ಲಿ ಸ್ಪಷ್ಟ ಗುರಿಯಿದ್ದರೆ ಯಶಸ್ಸು ಸುಲಭ

ಅರಕಲಗೂಡು ತಾಲೂಕಿನ ರಾಮನಾಥಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯು ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಎ. ಮಂಜು, ಕೃಷ್ಣೇಗೌಡ, ರೂಪ, ಸಿದ್ದಯ್ಯ ಇತರರಿದ್ದರು.

Published on
ಅರಕಲಗೂಡು: ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ ಜವಾಬ್ದಾರಿಯುತವಾಗಿ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಶಾಸಕ ಎ. ಮಂಜು ಹೇಳಿದರು.
ತಾಲೂಕಿನ ರಾಮನಾಥಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯು ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಏನಾಗಬೇಕು ಎಂಬ ಕನಸನ್ನು ಈಗಲೇ ರೂಪಿಸಿಕೊಂಡು ಅದನ್ನು ಸಾಕಾರಗೊಳಿಸಲು ನಿರಂತರ ಪರಿಶ್ರಮ ವಹಿಸಬೇಕು. ಕೇವಲ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದಷ್ಟೇ ಸಾಕಾಗುವುದಿಲ್ಲ. ಪ್ರತಿಭೆ, ಕೌಶಲ್ಯ ಹಾಗೂ ಆತ್ಮವಿಶ್ವಾಸವೂ ಜೀವನದಲ್ಲಿ ಯಶಸ್ಸು ಪಡೆಯಲು ಅತ್ಯಂತ ಮುಖ್ಯವಾಗಿವೆ ಎಂದು ಹೇಳಿದರು.
ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ಉದ್ದೇಶದಿಂದ ರಾಮನಾಥಪುರದಲ್ಲಿ ಸರ್ಕಾರಿ ಮಹಿಳಾ ಕಾಲೇಜು ಸ್ಥಾಪನೆಗಾಗಿ ವಿಶೇಷ ಶ್ರಮ ವಹಿಸಿದ್ದಾಗಿ ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕೃಷ್ಣೇಗೌಡ, ರೂಪಾ ಮಹದೇವ, ಸಿದ್ದಯ್ಯ, ಭರತ್, ಮಂಜುನಾಥ್, ಪ್ರಾಂಶುಪಾಲೆ ಸರ್ವಮಂಗಳ, ಉಪನ್ಯಾಸಕರು ಇದ್ದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾಲೇಜಿನಲ್ಲಿ 9 ಲಕ್ಷ ರೂ ವೆಚ್ಚದ ಮೇಲ್ಛಾವಣಿಗೆ ಸ್ಥಾಪನೆಗೆ ಚಾಲನೆ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net