ಅಚಲ ನಿರ್ಧಾರದಿಂದ ಯಶಸ್ಸು ಸಾಧ್ಯ / CHANARAYAPATTAN

ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕರ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಮೇಶ್​, ಗೌರವಾಧ್ಯಕ್ಷ ಭೈರೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ವಿ.ಸುನೀಲ್​, ಪ್ರಾಂಶುಪಾಲ ಜಗದೀಶ್​, ಇತರರು ಇದ್ದರು.
ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕರ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಮೇಶ್​, ಗೌರವಾಧ್ಯಕ್ಷ ಭೈರೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ವಿ.ಸುನೀಲ್​, ಪ್ರಾಂಶುಪಾಲ ಜಗದೀಶ್​, ಇತರರು ಇದ್ದರು.
Published on
ಚನ್ನರಾಯಪಟ್ಟಣ : ವಿದ್ಯಾರ್ಥಿಗಳು ಅಚಲ ನಿರ್ಧಾರದಿಂದ ಅಧ್ಯಯನ ಮಾಡಿದರೆ ಯಶಸ್ಸು ಸುಲಭವಾಗಲಿದೆ ಎಂದು ಪ್ರಾಂಶುಪಾಲ ಜಗದೀಶ್​ ಹೇಳಿದರು.
ಬೂದಿಗೆರೆಯಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನಿಂದ ಹಮ್ಮಿಕೊಂಡಿದ್ದ "ಅಮೂಲ್ಯ ದಿನಗಳು' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಸಂಸ್ಕಾರ ಮತ್ತು ಪರಂಪರೆ ಬಗ್ಗೆ ತಿಳಿವಳಿಕೆ ಮೂಡಿಸುವುದು ಶಿಕ್ಷಕರು, ಪಾಲಕರ ಮತ್ತು ಸಮಾಜದ ಕರ್ತವ್ಯ. ಗುಣಮಟ್ಟದ ಶಿಕ್ಷಣ ನೀಡುವುದು ಎಷ್ಟು ಮುಖ್ಯವೋ ಸಂಸತಿ, ಪರಂಪರೆ ಬಗ್ಗೆ ಅರಿವು ಮೂಡಿಸುವುದು ಅಷ್ಟೇ ಮುಖ್ಯ. ಮಾನವೀಯ ಮೌಲ್ಯಗಳನ್ನು ಮಕ್ಕಳು ರೂಢಿಸಿಕೊಳ್ಳುವ ಹಾಗೆ ನಾವೆಲ್ಲರೂ ಪ್ರೇರೇಪಿಸಬೇಕು ಎಂದರು.
ದೇವನಹಳ್ಳಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಶ್ರೀನಿವಾಸ್​ ಗೌಡ ಮಾತನಾಡಿ, ಪಾಲಕರು ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣಕ್ಕಿಂತ ಅಂಕಗಳ ಆಧಾರಿತ ಶಿಕ್ಷಣಕ್ಕೆ ಆದ್ಯೆತ ನೀಡುತ್ತಿರುವುದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇನ್ನಾದರೂ ಪಾಲಕರು ಮಕ್ಕಳ ಮನಸ್ಥಿತಿ ಅರಿಯಬೇಕು. ಪೂರ್ವಿಕರ ಕಾಲದಲ್ಲಿ ಗುರುಕುಲ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಪ್ರಸ್ತುತ ವೈಜ್ಞಾನಿಕ ಶಿಕ್ಷಣ ಯುಗದಲ್ಲಿ ಎಲ್ಲವೂ ಮಾಯವಾಗಿ ಸಂಬಂಧಗಳನ್ನೇ ಮರೆಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂ. ಉತ್ತರ ತಾಲೂಕಿನ ಪಿಎಲ್​ಡಿ ಬ್ಯಾಂಕ್​ ಮಾಜಿ ಅಧ್ಯಕ್ಷ ಎಲ್​ಐಸಿ ನಾರಾಯಣಸ್ವಾಮಿ ಮಾತನಾಡಿ, ಅನುಭವ, ಛಲ, ಸತತ ಪ್ರಯತ್ನಗಳ ಮೂಲಕ ಗುರಿ ಸಾಧಿಸಬಹುದು. ಅವಮಾನ, ಅನುಮಾನ, ಸಮ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ. ಮನಸ್ಸಿನ ಶಕ್ತಿಯನ್ನು ಎಂದಿಗೂ ತ್ಯಜಿಸಬಾರದು, ಅವಕಾಶಗಳನ್ನು ಕೈಬಿಡಬಾರದು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು, ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ. ಯಾವ ಕೆಲಸವೇ ಆಗಲಿ ಅದಕ್ಕೆ ಪ್ರಯತ್ನ ಮತ್ತು ಆತ್ಮವಿಶ್ವಾಸ ಇದ್ದಾಗ ಯಶಸ್ಸು ಲಭಿಸುತ್ತದೆ ಎಂದರು.
ಹಳೇ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಭೈರೇಗೌಡ ಮಾತನಾಡಿ, ದೃಢ ಗುರಿ ಇಟ್ಟುಕೊಂಡಾಗ ಶಿಕ್ಷಣ ಸಾರ್ಥಕ. ಮಾನವೀಯತೆ ರೂಢಿಸಿಕೊಂಡಾಗ ಗೌರವ ಸಿಗುತ್ತದೆ. ಗೌರವ ಹುಡುಕಿಕೊಂಡು ಬರುವಂತೆ ಬೆಳೆಯಬೇಕು ಎಂದರು.
ಹಳೆಯ ವಿದ್ಯಾರ್ಥಿಗಳ ಸಂಘದ ಪಧಾದಿಕಾರಿಗಳಾದ ಈರಣ್ಣ, ಶಿವರಾಜ್​, ಅನಂತರಾಜ, ಚೇತನ್​, ನಟರಾಜ್​, ಉಪನ್ಯಾಸಕರಾದ ಮುರಳಿ, ಕೃಷ್ಣ, ರಾಜಶೇಖರ್​, ಚೇತ್ರಾ, ಶ್ರೀ ಸಿದ್ಧಗಂಗಾ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಸುಮಿತ್ರಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net