ಯಶಸ್ಸಿಗೆ ಬೇಕು ಪರಿಶ್ರಮ, ಮಾರ್ಗದರ್ಶನ

ಬಸವಕಲ್ಯಾಣದ ಎಸ್​ಬಿಆರ್​ ಪಬ್ಲಿಕ್​ ಸ್ಕೂಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಬಸವರಾಜ ಎವಲೆ ಪ್ರಾಚಾರ್ಯ ಡಾ.ವಿದ್ಯಾದರ್​ ಡಿ., ರಾಜಕುಮಾರ್​ ಮಾಡಗೆ ಇತರರಿದ್ದರು.
ಬಸವಕಲ್ಯಾಣದ ಎಸ್​ಬಿಆರ್​ ಪಬ್ಲಿಕ್​ ಸ್ಕೂಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಬಸವರಾಜ ಎವಲೆ ಪ್ರಾಚಾರ್ಯ ಡಾ.ವಿದ್ಯಾದರ್​ ಡಿ., ರಾಜಕುಮಾರ್​ ಮಾಡಗೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಬಸವರಾಜ ಎವಲೆ ಅಭಿಮತ
  • ಬಸವಕಲ್ಯಾಣದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ
ಬಸವಕಲ್ಯಾಣ: ನಿಯಮಿತ ಅಭ್ಯಾಸ, ಪರಿಶ್ರಮ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನದಿಂದ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಎಸ್​ಎಸ್​ಕೆಬಿ ಕಾಲೇಜು ಕ್ಯಾಂಪಸ್​ ನಿರ್ದೇಶಕ ಡಾ.ಬಸವರಾಜ ಎವಲೆ ಹೇಳಿದರು.
ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ದಕ ಸಂದಡಿ ನಗರದಲ್ಲಿ ನಡೆಯುವ ಎಸ್​ಬಿಆರ್​ ಪಬ್ಲಿಕ್​ ಸ್ಕೂಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶ್ರಮ ವಹಿಸಿ ಅಭ್ಯಾಸ ಮಾಡುವ ಜತೆಗೆ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ಸಮಾಜಕ್ಕೆ ನಡಿಗೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ವಿದ್ಯಾದರ್​ ಡಿ. ಮಾತನಾಡಿ, ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಕರ ಕಾಳಜಿ ಪೂರ್ವಕ ಪ್ರಯತ್ನದಿಂದಾಗಿ ಉತ್ತಮ ಫಲಿತಾಂಶ ಬಂದಿದೆ. ಸಾಧನೆಗೆ ಮನಸ್ಸು ಮತ್ತು ಪ್ರಯತ್ನ ಮತ್ತು ಧನಾತ್ಮಕ ಚಿಂತನೆ ಮುಖ್ಯ. ಸಮಯ ಸೌಲಭ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ವಿದ್ಯಾಥಿಗಳು ಶ್ರಮ ವಹಿಸಿ ಅಭ್ಯಾಸ ಮಾಡಬೇಕು. ಅಂದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಪತ್ರಕರ್ತ ಜೋಶಿ ಮಾತನಾಡಿದರು. ಪ್ರಾಚಾರ್ಯ ರಾಜಕುಮಾರ್​ ಮಾಡಗೆ, ಚಂದ್ರಕಾಂತ ಸ್ವಾಮಿ, ಅಕ್ಷತಾ ಮಠಪತಿ, ನಿರ್ಮಾಲಾ ೂಡವಾಡೆ, ಶಾಂತಮ್ಮ ಬಿರಾದಾರ, ಶಿವಾನಂದ ಬಿರಾದಾರ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು. ಅಕ್ಷತಾ ಮಠಪತಿ ಹಾಗೂ ನಿರ್ಮಲಾ ೂಡವಾಡೆ ಸ್ವಾಗತಿಸಿ, ನಿರೂಪಣೆ ಮಾಡಿದರು. ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಹೆಚ್ಚು ಅಂಕ ಪಡೆದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪೋತ್ಸಾಹಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net