ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೀಜವನ್ನು ಪ್ರತಿ ಕ್ವಿಂಟಾಲ್‌ಗೆ 7,721 ರೂ. ದರದಲ್ಲಿ ಖರೀದಿಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಆದೇಶಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದಾರೆ.