ಅಹಮದಾಬಾದ್: ಸರ್ವಾಂಗೀಣ ನಿರ್ವಹಣೆಯೊಂದಿಗೆ ಅಜೇಯ ಓಟವನ್ನು ಸತತ 5ನೇ ಪಂದ್ಯಕ್ಕೆ ವಿಸ್ತರಿಸಿದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್-19ರ ಪ್ಲೇಆಫ್ ಸ್ಥಾನ ಬಹುತೇಕ ಖಾತ್ರಿ ಪಡಿಸಿಕೊಂಡಿದ್ದು, ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ. ಎಡಗೈ ಬ್ಯಾಟರ್ ಸಾಯಿ ಸುದರ್ಶನ್ (61 ರನ್, 44 ಎಸೆತ, 5 ಬೌಂಡರಿ, 2 ಸಿಕ್ಸರ್) ಜವಾಬ್ದಾರಿಯುತ ಬ್ಯಾಟಿಂಗ್, ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (50 ರನ್, 33 ಎಸೆತ, 7 ಬೌಂಡರಿ, 1 ಸಿಕ್ಸರ್) ಅರ್ಧಶತಕದ ಜತೆಗೆ ಕಗಿಸೊ ರಬಾಡ (28ಕ್ಕೆ 3) ಸಹಿತ ಇತರ ವೇಗಿಗಳ ಕರಾರುವಾಕ್ ದಾಳಿಯ ನೆರವಿನಿಂದ ಶುಭಮಾನ್ ಗಿಲ್ ಪಡೆ ಸನ್‌ರೈಸರ್ಸ್ ಹೈದರಾಬಾದ್ ಎದುರು 82 ರನ್‌ಗಳ ಜಯ ಸಾಧಿಸಿತು.