ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಪ್ರತಿನಿತ್ಯ 9,500 ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪೂರೈಸಲು ಕ್ರಮ ಕೈಗೊಂಡಿದೆ. ಇದರಲ್ಲಿ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌ಗಳು, ರೈಲ್ವೆ ಮತ್ತು ವಿಮಾನ ನಿಲ್ದಾಣಗಳಂತಹ ಅತಿ ಅಗತ್ಯ ಸೇವೆಗಳಿಗೆ ನಿತ್ಯ 4,500 ಸಿಲಿಂಡರ್‌ಗಳನ್ನು ಮೀಸಲಿಡಲಾಗಿದೆ. ಇನ್ನು ಆಟೋ ರಿಕ್ಷಾಗಳಿಗೆ 2,500 ಹಾಗೂ ಹೋಟೆಲ್‌ಗಳಿಗೆ 1,000 ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ.